
ಅಬುದಾಬಿ, (ಡಿ.6): ಪಾಕಿಸ್ತಾನದ ಲೆಗ್ ಸ್ಪಿನ್ನರ್ ಯಾಸಿರ್ ಶಾ ಗುರುವಾರ ಅತ್ಯಂತ ವೇಗವಾಗಿ 200 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಈ ದಾಖಲೆ ನಿರ್ಮಿಸುವ ಮೂಲಕ 82 ವರ್ಷಗಳ ಹಳೇ ದಾಖಲೆ ಉಡೀಸ್ ಮಾಡಿದರು.
ವಿಲ್ ಸೊಮರವಿಲ್ಲೆ ಅವರನ್ನ ಎಲ್ ಬಿಡ್ಲ್ಯೂ ಬಲೆಗೆ ಬೀಳಿಸುವ ಮೂಲಕ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಯಾಸಿರ್ ಪಾತ್ರರಾದರು.
32 ವರ್ಷದ ಯಾಸೀರ್, ತಮ್ಮ 33ನೇ ಟೆಸ್ಟ್ನಲ್ಲಿಯೇ ಎಲ್ಲರಿಗಿಂತ ವೇಗವಾಗಿ 200 ವಿಕೆಟ್ ಪಡೆದ ದಾಖಲೆ ಬರೆದರು.
ಈ ಹಿಂದೆ 1936 ರಲ್ಲಿ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಕ್ಲ್ಯಾರಿ ಗ್ರಿಮ್ಮೆಟ್ 36 ಟೆಸ್ಟ್ ಪಂದ್ಯಗಳಲ್ಲಿ 200ನೇ ವಿಕೆಟ್ ಪಡೆದು ದಾಖಲೆ ಬರೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.