ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದ ಭಾರತದ ಸ್ಟಾರ್ ಮಹಿಳಾ ಶೆಟ್ಲರ್ ಪಿ.ವಿ.ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ ಸೇರಿಂತೆ ಹಲವರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ಕರ್ನಾಟಕ ಸಿಎಂ, ಸಿಂಧುಗೆ ಅಭಿನಂದನೆಗಳನ್ನು ತಿಳಿಸುವುದರ ಜತೆಗೆ ಬಹುಮಾನ ಘೋಷಣೆ ಮಾಡಿದ್ದಾರೆ.
ನವದೆಹಲಿ/ಬೆಂಗಳೂರು, [ಆ.25]: ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಪಿ.ವಿ.ಸಿಂಧುಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿದೆ.
ವಿಶ್ವ ಬ್ಯಾಡ್ಮಿಂಟನ್: ಚಿನ್ನ ಗೆದ್ದು ಇತಿಹಾಸ ಬರೆದ PV ಸಿಂಧು
ನವದೆಹಲಿಯಲ್ಲಿ ಪಿವಿ ಸಿಂಧು ಸಾಧನೆಗೆ ಶುಭ ಕೋರಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಡ್ಮಿಂಟನ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಿಂಧುಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ನೀಡೋದಾಗಿ ಹೇಳಿದರು.
Congratulations to on creating history by winning India's FIRST ever Gold at BWF World Championships 2019.
We are PROUD of you. 🇮🇳 pic.twitter.com/nb2VWeYhes
ಇಂದು [ಭಾನುವಾರ] ಸ್ವಿಟ್ಜರ್ಲೆಂಡ್ ನಲ್ಲಿ ನಡೆದ ಮಹಿಳಾ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಜಪಾನ್ ನ ಸ್ಟಾರ್ ಆಟಗಾರ್ತಿ ನೊಜೊಮಿ ಒಕುಹರಾರನ್ನ 21-7, 21-7 ನೇರ ಸೆಟ್ ಗಳಿಂದ ಮಣಿಸಿದರು. ಈ ಮೂಲಕ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾದರು.