
ನವದೆಹಲಿ(ಅ.11): 2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತದ ಭರವಸೆಯ ಕುಸ್ತಿ ಪಟು ಯೋಗೇಶ್ವರ್ ದತ್ ಅವರ ನಿಶ್ಚಿತಾರ್ಥ ಕಾಂಗ್ರೆಸ್ ನಾಯಕನ ಪುತ್ರಿಯೊಂದಿಗೆ ನೆರವೆರಿದೆ.
ಕಾಂಗ್ರೆಸ್ ನಾಯಕ ಜೈ ಭಗವಾನ್ ಶರ್ಮಾ ಅವರ ಪುತ್ರಿ ಶೀತಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ದತ್ ಕುಟುಂಬದ ಆಪ್ತರು ಹಾಗೂ ಕೆಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜಿ ಭೂಷಣ್ ಶರಣ್ , ಎಎಪಿ ಹರಿಯಾಣ್ ರಾಜ್ಯ ಮುಖ್ಯಸ್ಥ ನವೀನ್ ಜೈಹಿಂದ್ ಸಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಯುವ ಜೋಡಿ ಮುಂದಿನ ವರ್ಷ ಜನವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.