
ಕಿಂಗ್'ಸ್ಟನ್(ಏ.24): ಪಾಕಿಸ್ತಾನದ ಯೂನಿಸ್ ಖಾನ್ ವೆಸ್ಟ್‌ಇಂಡೀಸ್ ವಿರುದ್ಧ ಮೊದಲ ಟೆಸ್ಟ್'ನಲ್ಲಿ 10 ಸಾವಿರ ರನ್ ಪೂರೈಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ.
ವೆಸ್ಟ್'ವಿಂಡೀಸ್ ಮೊದಲ ಇನಿಂಗ್ಸ್'ನಲ್ಲಿ 268 ರನ್' ದಾಖಲಿಸಿತ್ತು. ಇದಕ್ಕುತ್ತರವಾಗಿ ಪಾಕಿಸ್ತಾನ ನಾಲ್ಕನೇ ದಿನದಾಟದ ಮೊದಲ ಸೆಷನ್ ವೇಳಗೆ 5 ವಿಕೆಟ್ ಕಳೆದುಕೊಂಡು 311 ರನ್ ಬಾರಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್'ನಲ್ಲಿ 25ರನ್'ಗಳ ಮುನ್ನಡೆ ಸಾಧಿಸಿದೆ.
ವೈಯುಕ್ತಿಕ ಮೊತ್ತ 39ರನ್ ಗಳಿಸುತ್ತಿದ್ದಂತೆ ಯೂನಿಸ್ ಚಾರಿತ್ರಿಕ ದಾಖಲೆ ಬರೆದರು. ಈ ಮೂಲಕ ಟೆಸ್ಟ್ ಕ್ರಿಕೆಟ್'ನಲ್ಲಿ 10 ಸಾವಿರ ರನ್ ಪೂರೈಸಿದ ಪಾಕಿಸ್ತಾನದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೂ ಯೂನಿಸ್ ಖಾನ್ ಪಾತ್ರರಾದರು.
ಇದರ ಜತೆಗೆ ಈ ಸಾಧನೆ ಮಾಡಿದ ವಿಶ್ವದ 13ನೇ ಮತ್ತು ಅತ್ಯಂತ ಹಿರಿಯ ಆಟಗಾರ ಎನ್ನುವ ದಾಖಲೆಗೂ ಯೂನಿಸ್ ಖಾನ್ ಪಾತ್ರರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.