
ನವದೆಹಲಿ(ಡಿ.11): ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರು, ‘ಸ್ಕಿಲ್ ಇಂಡಿಯಾ’ದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈಗಾಗಲೇ ರಾಯಭಾರಿಯಾಗಿ ನೇಮಕವಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಜತೆಗೆ ಕೊಹ್ಲಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಈ ಬಗ್ಗೆ ವಿವರಣೆ ನೀಡಿರುವ ಸ್ಕಿಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮನೀಶ್ ಕುಮಾರ್, ‘‘ಭಾರತದ ಯುವಜನತೆಯ ಐಕಾನ್‌ಗಳಂತಾಗಿರುವ ಸಚಿನ್, ಕೊಹ್ಲಿ ಮತ್ತು ಸಿದ್ಧಾರ್ಥ್ ಅವರು ಪ್ರಧಾನಿ ಮೋದಿಯವರ ಸ್ಕಿಲ್ ಇಂಡಿಯಾ ಕನಸನ್ನು ಯುವ ಜನತೆಯತ್ತ ಕೊಂಡೊಯ್ಯುವ ವಿಶ್ವಾಸವಿದೆ’’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.