
ಮುಂಬೈ(ಅ.24): ಇದೇ ನ.21ರಿಂದ ಶಾರ್ಜಾದಲ್ಲಿ ಆರಂಭ ಗೊಳ್ಳಲಿರುವ 2ನೇ ಆವೃತ್ತಿಯ ಟಿ10 ಲೀಗ್‌ನಲ್ಲಾಡಲು ಮಾಜಿ ಕ್ರಿಕೆಟಿಗರಾದ ಜಹೀರ್ ಖಾನ್, ಆರ್.ಪಿ.ಸಿಂಗ್ ಒಪ್ಪಂದ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದ ಪ್ರವೀಣ್ ಕುಮಾರ್, ಎಸ್.ಬದ್ರಿನಾಥ್, ರೀತೇಂದರ್ ಸಿಂಗ್ ಸೋಧಿ ಸಹ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಇವರೆಲ್ಲರೂ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದು ಹೊಸ ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ವೀರೇಂದ್ರ ಸೆಹ್ವಾಗ್ ಹಾಗೂ ಶಾಹೀದ್ ಅಫ್ರಿದಿ ಟೂರ್ನಿಯ ಐಕಾನ್‌ಗಳಾಗಿದ್ದು, ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಮೊದಲ ಆವೃತ್ತಿಯಲ್ಲಿ 6 ತಂಡಗಳಿದ್ದವು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.