
ಲಂಡನ್(ಜೂ.10): ಪಾಕಿಸ್ತಾನ ವಿರುದ್ಧ ಪಂದ್ಯದ ವೇಳೆ ದ.ಆಫ್ರಿಕಾದ ನಾಯಕ ಎಬಿ ಡಿವಿಯರ್ಸ್ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಲು ಟಿವಿ ಆ್ಯಂಕರ್ ಒಬ್ಬಳ ಜತೆ ತೆಗಿಸಿಕೊಂಡ ಸೆಲ್ಫಿಯೊಂದು ಕಾರಣ ಎಂದು ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದ್ದು, ಅಭಿಮಾನಿಗಳು ಆಕೆಯನ್ನು ಟೀಕಿಸುತ್ತಿದ್ದಾರೆ.
ಪಾಕಿಸ್ತಾನದ ಟಿವಿ ನಿರೂಪಕಿ ಝೈನಬ್ ಅಬ್ಬಾಸ್, ಪಾಕಿಸ್ತಾನ-ಆಫ್ರಿಕಾ ಪಂದ್ಯಕ್ಕೂ ಮುನ್ನ ಎಬಿಡಿ ಜತೆ ಸೆಲ್ಫಿ ತೆಗೆದುಕೊಂಡಿದ್ದರು. ಪಂದ್ಯದಲ್ಲಿ ಆಫ್ರಿಕಾ ನಾಯಕ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಇನ್ನು ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಆಕೆ ಕೊಹ್ಲಿ ಜತೆ ಸೆಲ್ಫಿ ತೆಗೆದುಕೊಂಡಿದ್ದರು. ಲಂಕಾ ವಿರುದ್ಧ ವಿರಾಟ್ ಸೊನ್ನೆಗೆ ನಿರ್ಗಮಿಸಿದರು. ಭಾರತ ವಿರುದ್ಧ ಪಂದ್ಯಕ್ಕೂ ಮುನ್ನ ಶ್ರೀಲಂಕಾ ಕ್ರಿಕೆಟ್ ಸಂಸ್ಥೆ, ಝೈನಬ್ ಅಬ್ಬಾಸ್‌ರನ್ನು ಯಾರೂ ಭೇಟಿ ಮಾಡದಂತೆ ಮಾಡಿದ್ದ ಟ್ವೀಟ್ ಅಚ್ಚರಿಗೆ ಕಾರಣವಾಗಿತ್ತು. ಆನಂತರ ಲಂಕಾ ಕ್ರಿಕೆಟ್ ಮಂಡಳಿ ತನ್ನ ಟ್ವಿಟರ್ ಪೇಜ್‌ನಿಂದ ಆ ಟ್ವೀಟನ್ನು ತೆಗೆದುಹಾಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.