
ಶೈಲೆಟ್[ನ.06]: ಟೆಸ್ಟ್ ಕ್ರಿಕೆಟ್’ನಲ್ಲಿ ಗೆಲುವಿಗಾಗಿ ಹಪಹಪಿಸುತ್ತಿದ್ದ ಜಿಂಬಾಬ್ವೆಗೆ ಸುಮಾರು 5 ವರ್ಷಗಳ ಬಳಿಕ ಗೆಲುವು ಸಿಕ್ಕಿದೆ. ಬಾಂಗ್ಲಾದೇಶದ ವಿರುದ್ಧ ಜಿಂಬಾಬ್ವೆ 151 ರನ್’ಗಳ ಸ್ಮರಣೀಯ ಗೆಲುವು ದಾಖಲಿಸಿದೆ.
ಗೆಲ್ಲಲು 321 ರನ್’ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ಕೇವಲ 169 ರನ್’ಗಳಿಗೆ ಸರ್ವಪತನ ಕಾಣುವ ಮೂಲಕ ಮೊಹಮ್ಮದುಲ್ಲಾ ಪಡೆ ತವರಿನಲ್ಲೇ ಮುಖಭಂಗ ಅನುಭವಿಸಿದೆ. ಪದಾರ್ಪಣೆ ಪಂದ್ಯದಲ್ಲೇ ಲೆಗ್ ಸ್ಪಿನ್ನರ್ ಬ್ರೆಂಡನ್ ಮೊವುತಾ[21/4] ಮಿಂಚಿನ ಬೌಲಿಂಗ್ ಪ್ರದರ್ಶನದ ನೆರವಿನಿಂದ 2013ರ ಬಳಿಕ ಜಿಂಬಾಬ್ವೆ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಪಾಕಿಸ್ತಾನವನ್ನು ಮಣಿಸಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಹ್ಯಾಮಿಲ್ಟನ್ ಮಸಕಜಾ[52], ಸೀನ್ ವಿಲಿಯಮ್ಸ್[88] ಹಾಗೂ ಪೀಟರ್ ಮೂರ್[63] ಆಕರ್ಷಕ ಅರ್ಧಶತಕಗಳ ನೆರವಿನಿಂದ 282 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್’ನಲ್ಲಿ 143 ರನ್’ಗಳಿಗೆ ಸರ್ವಪತನ ಕಾಣುವ ಮೂಲಕ ಹಿನ್ನಡೆ ಅನುಭವಿಸಿತು. ಇನ್ನು ದ್ವಿತೀಯ ಇನ್ನಿಂಗ್ಸ್’ನಲ್ಲಿ ಜಿಂಬ್ವಾಬ್ವೆ 181 ರನ್ ಬಾರಿಸಿ ಸರ್ವಪತನ ಕಂಡಿತು. ಗೆಲ್ಲಲು ಬೃಹತ್ ಮೊತ್ತ ಬೆನ್ನಟ್ಟಿದ ಬಾಂಗ್ಲಾದೇಶ ಕೇವಲ 169 ರನ್’ಗಳಿಗೆ ಆಲೌಟ್ ಆಗುವ ಮೂಲಕ ನಿರಾಸೆ ಅನುಭವಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.