ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಸಾಕ್ಷರತೆಯಲ್ಲಿ ಹಿಂದುಳಿದಿವೆ. ಆ ಜಿಲ್ಲೆಗಳಲ್ಲೇ ಅತಿ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ ಇವೆ. ಇದರಿಂದ ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿದೆ ಎಂದ ಬಿ.ಆರ್.ಪಾಟೀಲ್
ವಿಧಾನಸಭೆ(ಜು.21): ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲೇ 18,780 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅಲ್ಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಬಿ.ಆರ್.ಪಾಟೀಲ್ ಒತ್ತಾಯಿಸಿದರು.
ಸದನದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಸಾಕ್ಷರತೆಯಲ್ಲಿ ಹಿಂದುಳಿದಿವೆ. ಆ ಜಿಲ್ಲೆಗಳಲ್ಲೇ ಅತಿ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ ಇವೆ. ಇದರಿಂದ ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿದೆ ಎಂದರು.
undefined
ಸರ್ಕಾರಿ ನೌಕರಿಗಾಗಿ ಹಣ ಕೊಟ್ಟು ಮೋಸ ಹೋಗಿದ್ದೀರಾ? ಇಲ್ಲಿದೆ ಹಣ ವಾಪಸ್ ಪಡೆವ ಮಾರ್ಗ!
ಅಲ್ಲದೆ, ಈ ಭಾಗದಲ್ಲಿ ಕುಡಿಯುವ ನೀರಿಗೂ ಬಹಳ ಸಮಸ್ಯೆ ಇದೆ. ಜನರು ಬಹಿರ್ದೆಸೆಗೆ ಹೋಗುವುದನ್ನು ತಪ್ಪಿಸಲು ಶೌಚಾಲಯ ನಿರ್ಮಾಣ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಇದರಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ, ಯೋಜನೆಗಳನ್ನು ನೀಡಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.