ಶಿಕ್ಷಕರಾಗಬೇಕೆನ್ನುವ ಆಕಾಂಕ್ಷಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಎಂ ಸಿಹಿ ಸುದ್ದಿ

By Suvarna News  |  First Published Sep 5, 2021, 7:10 PM IST

* ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕರಾಗುವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ
 * 5 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧಾರ
* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ


ಬೆಂಗಳೂರು, (ಸೆ.05): ಶಿಕ್ಷಕರಾಗಲು ಬಯಸುತ್ತಿರುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಕರ ದಿನಾಚರಣೆ ದಿನದಂದೇ ಸಿಹಿ ಸುದ್ದಿ ನೀಡಿದ್ದಾರೆ.

ಹೌದು... ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Tap to resize

Latest Videos

undefined

ಜಾಬ್ಸ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ, ಅದನ್ನು ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಐದು ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಸರ್ವಪಲ್ಲಿ ರಾಧಾಕೃಷ್ಣನ್ ಜೀವನ ನಮಗೆಲ್ಲರಿಗೂ ಆದರ್ಶವಾಗಿದೆ. ಸಾತ್ವಿಕತೆ, ವೈಚಾರಿಕತೆ ತುಂಬಿದ ಅಪರೂಪದ ನಾಯಕರಾಗಿದ್ದರು. ಗುರುಗಳಿಲ್ಲದೆ ನಾಗರಿಕ ಸಮಾಜ ಕಟ್ಟುವುದಕ್ಕೆ ಆಗುವುದಿಲ್ಲ. ದೇವರ ಬಳಿಕ ಗುರುವೇ. ಗುರು ಇಲ್ಲದೆ ದೇವರು ಸಿಗುವುದಿಲ್ಲ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಹೊಸ ಶಿಕ್ಷಣ ನೀತಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಇದಕ್ಕಾಗಿ ಸಿದ್ಧರಾಗಬೇಕಿದೆ. ಹೊಸ ನೀತಿ ಬಂದಾಗ ಪರ-ವಿರೋಧ ಇರುವುದು ಸಹಜ. ಇಂದಿನ ಸವಾಲು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಬೇಕಾಗಿದೆ ಎಂದು ಹೇಳಿದರು.

ಇನ್ನು ಇದೇ ವೇಳೆ ಪ್ರಾಥಮಿಕ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿಗಳು ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸ ಇದೆ ಎಂದರು.

click me!