* ಖಾಲಿ ಹುದ್ದೆ ಪೈಕಿ 257 ಹುದ್ದೆಗಳ ಭರ್ತಿಗೆ ಅನುಮತಿ
* ಉಳಿದ 1924 ಹುದ್ದೆಗಳ ಭರ್ತಿ ಮಾಡಲು ಪ್ರಸ್ತಾವನೆ
* ನಮೋಶಿ, ಪುಟ್ಟಣ್ಣ ಹಾಗೂ ಶಹಾಪುರ ಪ್ರಶ್ನೆಗೆ ಉತ್ತರಿಸಿರುವ ಸಚಿವ ನಾಗೇಶ್
ಬೆಂಗಳೂರು(ಫೆ.23): ರಾಜ್ಯದಲ್ಲಿ(Karnataka) 2015ರ ಡಿಸೆಂಬರ್‌ವರೆಗೆ ನಿವೃತ್ತಿ, ಮರಣ ಹಾಗೂ ರಾಜೀನಾಮೆಯಿಂದ ಖಾಲಿ ಇರುವ 2181 ಹುದ್ದೆಗಳ ಪೈಕಿ 257 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಉಳಿದ 1924 ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್(BC Nagesh) ತಿಳಿಸಿದ್ದಾರೆ.
ಬಿಜೆಪಿಯ(BJP) ಶಶೀಲ್ ಜಿ. ನಮೋಶಿ, ಪುಟ್ಟಣ್ಣ ಹಾಗೂ ಅರುಣ ಶಹಾಪುರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ನೇಮಕಾತಿಗೆ(Recruitment) ಈಗಾಗಲೇ ಅನುಮತಿಸಿರುವ 257 ಹುದ್ದೆಗಳ ಪೈಕಿ 54 ಹುದ್ದೆಗಳನ್ನು ಆಯುಕ್ತಾಲಯಗಳ ಹಂತದಲ್ಲಿ ಭರ್ತಿ ಮಾಡಿದ್ದು, ಇನ್ನುಳಿದ 203 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ವಿವಿಧ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ವಿವರಿಸಿದರು.
undefined
KMF Jobs: 460 ವಿವಿಧ ಹುದ್ದೆ ಭರ್ತಿಗೆ ಮುಂದಾದ ಕೆಎಂಎಫ್, ಹೆಚ್ಚಿನ ಮಾಹಿತಿ ಏನು?
ಅನುದಾನಿತ ಪದವಿಪೂರ್ವ ಕಾಲೇಜುಗಳಿಗೆ ಸಂಬಂಧಿಸಿದಂತೆ ಕಾರ್ಯಭಾರದ ಮೇಲೆ ಪರಿಗಣಿತವಾಗಿ ಒಟ್ಟು 998 ಹುದ್ದೆಗಳ ಪೈಕಿ 323 ಹುದ್ದೆಗಳನ್ನು ಈವರೆಗೆ ಭರ್ತಿ ಮಾಡಲಾಗಿದೆ. ಉಳಿದ ಖಾಲಿ ಇರುವ 675 ಹುದ್ದೆಗಳ ಪೈಕಿ 436 ಹುದ್ದೆಗಳಿಗೆ ಆಡಳಿತ ಮಂಡಳಿಗಳು ಈವರೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಿರ್ದೇಶನಾಲಯದ ಹಂತದಲ್ಲಿ 239 ಹುದ್ದೆಗಳ ಪ್ರಸ್ತಾವನೆಗಳನ್ನು ವಿವಿಧ ಹಂತದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಜಾಹಿರಾತು ಸಂಬಂಧ ಕ್ರಮ:
ನೇಮಕಾತಿ ಜಾಹಿರಾತು ನೀಡಿಕೆ ಸಂಬಂಧ ಕಳೆದ ಡಿಸೆಂಬರ್ 21ರಂದು ಬೆಳಗಾವಿಯಲ್ಲಿ(Belagavi) ಸಭಾಪತಿ ಹಾಗೂ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯ ನಿರ್ಣಯದ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖವಾಗಿ ಹೆಚ್ಚು ಪ್ರಚಾರದಲ್ಲಿ ಇರುವ ಒಂದು ರಾಜ್ಯಮಟ್ಟದ ದಿನ ಪತ್ರಿಕೆ ಹಾಗೂ ಒಂದು ಜಿಲ್ಲಾ ಮಟ್ಟದ ಪತ್ರಿಕೆಯಲ್ಲಿ ಪ್ರಚಾರ ನೀಡಿದ್ದಲ್ಲಿ ಮತ್ತು ಮುಖಪುಟ ಹೊರತುಪಡಿಸಿ, ಪತ್ರಿಕೆಯ ಯಾವುದೇ ಪುಟ/ಆವೃತ್ತಿಯಲ್ಲಿದ್ದರೂ ಒಂದು ಬಾರಿಯ ಕ್ರಮವಾಗಿ ಪರಿಗಣಿಸಬೇಕು ಹಾಗೂ ಈಗಾಗಲೇ ತಿರಸ್ಕೃತಗೊಂಡಿರುವ ಪ್ರಕರಣಗಳನ್ನು ಸಹ ಮರು ಪರಿಶೀಲಿಸಿ ಪರಿಗಣಿಸುವಂತೆ ತಿಳಿಸಲಾಗಿದೆ.
ಕೇವಲ ಒಂದೇ ದಿನ ಪತ್ರಿಕೆಯಲ್ಲಿ ಪ್ರಕಟಣೆಯಾಗಿರುವ ಪ್ರಕರಣಗಳನ್ನು ತಿರಸ್ಕರಿಸಿ ನಿಯಮದಂತೆ ಮರು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿ, ಆಡಳಿತ ಮಂಡಳಿಗಳಿಗೆ ಅಂತಹ ಪ್ರಸ್ತಾವನೆಗಳನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ವಿವರಿಸಿದರು.
ಪಶು ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ : ಚವ್ಹಾಣ್
ಬೆಳಗಾವಿ: ಪಶು ಸಂಗೋಪನೆ ಇಲಾಖೆಯಲ್ಲಿ (Animal Husbandry Department ) ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ ಎಂದು ತಿಳಿಸಿರುವ ಸಚಿವ ಪ್ರಭು ಚೌವ್ಹಾಣ್ (Prabhu Chavan) ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyutappa) ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದರು.
Hijab row: ಬಳೆ, ಸಿಂಧೂರ, ಕುಂಕುಮ ಧರಿಸಿ ಬಂದರೆ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ
ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದಿದ್ದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯ್ದೆ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳಿಗೆ ಸಿಬ್ಬಂದಿ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು.
ಪ್ರತಿಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಸದಸ್ಯರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು ಪ್ರಶ್ನೆ ಹಾಕುವುದು ವಾಡಿಕೆಯಾಗಿತ್ತು.