ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ

By Suvarna News  |  First Published Jan 7, 2020, 4:00 PM IST

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.


ಬೆಂಗಳೂರು, (ಜ.07):  ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ 11 ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 23,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

undefined

ವಿದ್ಯಾರ್ಹತೆ:  ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ,ಸ್ನಾತಕೋತ್ತರ ಪದವಿ,ಎಂ.ಫಿಲ್ ಮತ್ತು ಪಿ.ಎಚ್‌ಡಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು.

ಉದ್ಯೋಗದ ಸುವರ್ಣ ಅವಕಾಶ: 8000 ಹುದ್ದೆಗಳಿಗೆ SBI ಅರ್ಜಿ ಆಹ್ವಾನ

ವೇತನ ಶ್ರೇಣಿ: ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200 ರಿಂದ 2,18,200 ರೂ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಳಿಗೆ 3000 ರೂ. ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 1,500 ರೂ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್/ಬ್ಯಾಂಕ್ ಚೆಕ್/ ಪೋಸ್ಟಲ್ ಆರ್ಡರ್ ಮೂಲಕ ಜನವರಿ 23,2020ರೊಳಗೆ ಪಾವತಿಸಬೇಕಿರುತ್ತದೆ.

ವಿವಿಧ ಹುದ್ದೆಗೆ KPTCL ನೇಮಕಾತಿ: ಅರ್ಜಿ ಹಾಕಿ

ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ,ರಾಯಚೂರಿನ ಅಧಿಕೃತ ವೆಬ್‌ಸೈಟ್‌ http://www.uasraichur.edu.in/index.php/en/ ಗೆ ಭೇಟಿ ನೀಡಿ. 

ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 23,2020ರೊಳಗೆ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು. 

ಕಚೇರಿಯ ವಿಳಾಸ: ರಿಜಿಸ್ಟ್ರಾರ್ ಕಚೇರಿ, ಲಿಂಗಸುಗೂರು-ಮಾನ್ವಿ ರಸ್ತೆ, ಕೃಷಿ ವಿಶ್ವವಿದ್ಯಾಲಯ, ರಾಯಚೂರು-584104.  

click me!