ATMA Kodagu Recruitment 2022; ವ್ಯವಸ್ಥಾಪಕ, ಆಶಾ ಕಾರ್ಯಕರ್ತೆ ಹುದ್ದೆಗೆ ನೇಮಕಾತಿ

By Suvarna NewsFirst Published Jun 18, 2022, 3:05 PM IST
Highlights

ಕೊಡಗು ಜಿಲ್ಲೆಯ ಕೃಷಿ ಇಲಾಖೆಯಲ್ಲಿ ವ್ಯವಸ್ಥಾಪಕರ ಹುದ್ದೆಗಳು ಖಾಲಿ ಇದ್ದು,  ಜೂ.25ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರವಾರದಲ್ಲಿ ಆಶಾ ಕಾರ್ಯಕರ್ತೆ ಹುದ್ದೆಗೆ ಖಾಲಿ ಇದ್ದು,  ಜೂ.30ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮಡಿಕೇರಿ (ಜೂ.18): ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ( Agriculture Technology Management Agency - ಎಟಿಎಂಎ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆ ಹಾಗೂ ಸಹಾಯಕ ವ್ಯವಸ್ಥಾಪಕ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2022-23 ನೇ ಸಾಲಿನ ಸೀಮಿತ ಅವಧಿಗೆ ಮಡಿಕೇರಿ ಹಾಗೂ ನಾಪೋಕ್ಲು ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ (ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ಅರಣ್ಯ/ರೇಷ್ಮೆ) ವಿದ್ಯಾರ್ಹತೆ ಹೊಂದಿದ್ದು ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್‌ ಆಫೀಸ್‌ನಲ್ಲಿ ಪರಿಣತಿ ಹೊಂದಿರತಕ್ಕದ್ದು. ವಯಸ್ಸು ಗರಿಷ್ಠ 45 ವರ್ಷ. ಮಾಸಿಕ ರು. 30 ಸಾವಿರ ಗೌರವ ಧನ ನೀಡಲಾಗುವುದು.

 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿಎಸ್ಸಿ/ಎಂಎಸ್ಸಿ (ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ಅರಣ್ಯ/ರೇಷ್ಮೆ) ವಿದ್ಯಾರ್ಹತೆ ಹೊಂದಿದ್ದು ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್‌ ಆಫೀಸ್‌ನಲ್ಲಿ ಪರಿಣತಿ ಹೊಂದಿರತಕ್ಕದ್ದು. ವಯಸ್ಸು ಗರಿಷ್ಠ 45 ವರ್ಷ ಆಗಿದ್ದು, ಮಾಸಿಕ ರು. 25 ಸಾವಿರ ಗೌರವ ಧನ ನೀಡಲಾಗುವುದು.

ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜೂ.25ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಅವರಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ.ಷೇಕ್‌ ತಿಳಿಸಿದ್ದಾರೆ.

2ND PUC RESULT TOPPERS LIST; ದ‌ಕ‌ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್, ಕಲಾ ವಿಭಾಗದಲ್ಲಿ ಶೂನ್ಯ! 

 ಕಾರವಾರದಲ್ಲಿ ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುಮಟಾ ತಾಲೂಕಿನ ಕತಗಾಲ, ದಿವಳ್ಳಿ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೆರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ, ಮಾವಿನಮನೆ ಹೋಬಳಿಯ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಆಯಾ ಗ್ರಾಪಂ/ಗ್ರಾಮ ಸಭೆಯಿಂದ/ ವಾರ್ಡ್‌ ಮಟ್ಟದಿಂದ  ಆಯ್ಕೆಗೂಂಡು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖಾಂತರ ತಾಲೂಕಿನ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Western Railway Recruitment 2022; ಬರೋಬ್ಬರಿ 3612 ಹುದ್ದೆಗಳ ನೇಮಕಾತಿ

ಯಾದಗಿರಿಯಲ್ಲಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಯಾದಗಿರಿ: 2022-23ನೇ ಸಾಲಿನ ಆಯವ್ಯಯ ಘೋಷಣೆಯಂತೆ ಸಮಾಜ ಕಲ್ಯಾಣ ನಿಲಯವಾರು ಅರ್ಜಿ ಸ್ವೀಕರಿಸುವ ಬದಲು ತಾಲ್ಲೂಕುವಾರು ಅರ್ಜಿ ಆಹ್ವಾನಿಸಿ ಸಿಇಟಿ ಕೌನ್ಸಲಿಂಗ್‌ ಮಾದರಿಯಲ್ಲಿ ಪ್ರವೇಶ ಕಲ್ಪಿಸಲಾಗುತ್ತಿದ್ದು, ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಈ ಕೆಳಕಂಡ ದಿನಾಂಕಗಳಂದು ಅರ್ಜಿ ಸ್ವೀಕಾರ ಹಾಗೂ ಆಯ್ಕೆ ಮಾಡಲಾಗುತ್ತದೆ ಎಂದು ಶಹಾಪೂರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇದೇ ಜೂನ್‌ 20 ಸೋಮವಾರ ರಂದು ಕೊನೆಯ ದಿನವಾಗಿದೆ, ಹೊಸ ಅರ್ಜಿ ತಾಲ್ಲೂಕು ಸಮಾಜ ಕಲ್ಯಾಣ ಅ​ಕಾರಿಗಳು ಪರಿಶೀಲನೆ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ ಜೂನ್‌ 22 ಬುಧವಾರ ಇದ್ದು, ಕೌನ್ಸಲಿಂಗ್‌ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಜೂನ್‌ 27ರ ಸೋಮವಾರಂದು ಪ್ರಕಟಣೆ ಮಾಡಲಾಗುವುದು, ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜುಲೈ 5ರ ಮಂಗಳವಾರದಂದು ನಿಗದಿಪಡಿಸಿದ ಅಂತಿಮ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!