AHVS Karnataka Recruitment 2022: ಎಹೆಚ್‌ವಿಎಸ್‌ 400 ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕಾತಿ

By Suvarna NewsFirst Published Mar 9, 2022, 8:01 PM IST
Highlights

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ.

ಬೆಂಗಳೂರು(ಜ.21): ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ (Animal Husbandry and Fisheries Department) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 400 ಪಶುವೈದ್ಯಾಧಿಕಾರಿ (Veterinary Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 22 ರ ಒಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಬಗ್ಗೆ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ವಿಕಾಸ ಸೌಧ, ಬೆಂಗಳೂರು - 560001 ಗೆ ತಿಳಿಸಬಹುದು.  ಹೆಚ್ಚಿನ ಮಾಹಿತಿಗೆ ಆಸಕ್ತರು ahf.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಶೇ.50 ರಷ್ಟು ಅಂಕಗಳೊಂದಿಗೆ  B.V.Sc, B.V.Sc(AH) ಪದವಿ ಪೂರ್ಣಗೊಳಿಸಿರಬೇಕು. 

Latest Videos

ಆಯ್ಕೆ ಪ್ರಕ್ರಿಯೆ: ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಮೆರಿಟ್ ಲಿಸ್ಟ್ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

KPSC RECRUITMENT 2022: ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು AHVS ಕರ್ನಾಟಕ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು. ಜೊತೆಗೆ ವರ್ಗಾನುಸಾರ ವಯೋಮಿತಿ ಸಡಿಲಿಕೆ ಕೂಡ ಇದೆ.

ಅರ್ಜಿ ಶುಲ್ಕ: ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಮಾಸಿಕ ವೇತನ: ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹52650 ರಿಂದ ₹97100 ವೇತನ ದೊರೆಯಲಿದೆ.

Central Railway Recruitment 2022: ತಾಂತ್ರಿಕ ಸಹಾಯಕ ಹುದ್ದೆಗೆ ಕೇಂದ್ರ ರೈಲ್ವೆ ನೇಮಕಾತಿ 

ಮಾರ್ಚ್ 4 ರಂದು ಕರ್ನಾಟಕ ಬಜೆಟ್ 2022 ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ್ದು, ಪಶುಸಂಗೋಪನಾ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಿಸಲಾಗಿದೆ, 100 ಪಶುಚಿಕಿತ್ಸಾಲಯಗಳು, ಹಾಲು ಉತ್ಪಾದಕರಿಗೆ  "ಕ್ಷೀರ  ಸಮೃದ್ಧಿ ಸಹಕಾರ ಬ್ಯಾಂಕ್" , ಹಾವೇರಿಯಲ್ಲಿ ಮೆಗಾ ಹಾಲು ಡೈರಿ, ಗೋಶಾಲೆ ನಿರ್ಮಾಣ, ಗೋವುಗಳ ದತ್ತು ಯೋಜನೆ, ಕುರಿಗಾಹಿಗಳಿಗೆ ಹಲವು ಯೋಜನೆಗಳು ಮಾತ್ರವಲ್ಲ ಕುಕ್ಕುಟ ಮತ್ತು ಹಂದಿ ಉದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ, ಈ ನಿಟ್ಟಿನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಶು ಚಿಕಿತ್ಸಾಲಯಗಳನ್ನು ಬಲಪಡಿಸುವುದರೊಂದಿಗೆ ನೂತನ 100 ಪಶುಚಿಕಿತ್ಸಾಲಯಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಖಾಲಿಯಿರುವ 400 ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಕ್ರಮವಹಿಸಲಾಗಿದೆ.

ರಾಜ್ಯದಲ್ಲಿಯೇ   ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು  ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ ನೀಡಲು "ಕ್ಷೀರ  ಸಮೃದ್ಧಿ ಸಹಕಾರ ಬ್ಯಾಂಕ್" ಸ್ಥಾಪಿಸಲು ಉದ್ದೇಶಿಸಲಾಗಿದೆ. ಸದರಿ ಬ್ಯಾಂಕಿಗೆ  ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಹಾಲು  ಮಹಾಮಂಡಳಿ  ಹಾಗೂ  ಜಿಲ್ಲಾ  ಹಾಲು  ಒಕ್ಕೂಟಗಳು ಒಟ್ಟಾರೆ 260  ಕೋಟಿ  ರೂ. ಮತ್ತು ರಾಜ್ಯ ಸರ್ಕಾರವು 100 ಕೋಟಿ ರೂ.ಗಳ ಷೇರು ಬಂಡವಾಳವನ್ನು ಒದಗಿಸಲಿದೆ.

click me!