ನೇಮಕಾತಿ ಭ್ರಷ್ಟಾಚಾರ ತಡೆಗೆ ಎಐ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Jan 12, 2025, 6:30 AM IST

ಲೋಕಸೇವಾ ಆಯೋಗದ ಮೂಲಕ ಮಾಡಲಾಗುವ ನೇಮಕಾತಿ ಪ್ರಕ್ರಿಯೆ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ವಾಗಿರಬೇಕಿದೆ. ಅದಕ್ಕಾಗಿ ಬೇರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ 
 


ಬೆಂಗಳೂರು(ಜ.12): ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಮತ್ತಿತರ ಕಾರಣಗಳಿಂದಾಗಿ ರಾಜ್ಯ ಲೋಕಸೇವಾ ಆಯೋಗಗಳ ಮೇಲಿನ ವಿಶ್ವಾಸಾರ್ಹತೆ ಕುಸಿಯುತ್ತಿದ್ದು, ಅದನ್ನು ಮರುಸ್ಥಾಪಿಸಲು ದೃಢ ಕ್ರಮಗಳನ್ನು ಅನುಷ್ಠಾನಗೊಳಿಸ ಲಾಗುವುದು ಹಾಗೂ ಕೃತಕ ಬುದ್ದಿಮತ್ತೆ ಸೇರಿ ಇನ್ನಿತರ ಆಧುನಿಕ ತಂತ್ರಜ್ಞಾನ ಬಳಸಿ ನೇಮಕಾತಿ ಪ್ರಕ್ರಿಯೆಯನ್ನು ಭ್ರಷ್ಟಾಚಾರ ರಹಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ರಾಜ್ಯ ಲೋಕಸೇವಾ ಆಯೋಗ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ 25ನೇ ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ ಸಮ್ಮೇಳನದಲ್ಲಿ ಮಾತನಾಡಿ, ಜನಕೇಂದ್ರಿತವಾಗಿದ್ದುಕೊಂಡು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಆಡಳಿತ ವೈಖರಿಯನ್ನು ಲೋಕಸೇವಾ ಆಯೋಗ ಅಳವಡಿಸಿಕೊಳ್ಳಬೇಕು. ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಗುಣಮಟ್ಟದ ಸೇವೆಗೆ ತರಬೇತಿ ನೀಡುವುದು ಅವಶ್ಯ ಎಂದರು. 

Tap to resize

Latest Videos

ಕೆಎಎಸ್ ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 50% ದೋಷ!

ಲೋಕಸೇವಾ ಆಯೋಗದ ಮೂಲಕ ಮಾಡಲಾಗುವ ನೇಮಕಾತಿ ಪ್ರಕ್ರಿಯೆ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ವಾಗಿರಬೇಕಿದೆ. ಅದಕ್ಕಾಗಿ ಬೇರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲಾಗುವುದು. ಅದರ ಜತೆಗೆ ಪ್ರಶ್ನೆಪತ್ರಿಕೆ ಸೋರಿಕೆಯಂಥ ಸವಾಲುಗಳನ್ನು ಎದುರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಕಳೆದು ಹೋಗುತ್ತಿರುವ ವಿಶ್ವಾಸಾರ್ಹತೆ ಹೆಚ್ಚಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. 

ಡಿಗ್ರಿ ಇಲ್ಲದೆ ಸಿಗುವ 10 ಅದ್ಭುತ ಸರ್ಕಾರಿ ಉದ್ಯೋಗಗಳು!

ಲೋಕಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿ ಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುತ್ತಿವೆ. ಅದನ್ನು ಮತ್ತಷ್ಟು ಉತ್ತಮಗೊಳಿಸಲು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ನೇರ ನೇಮ ಕಾತಿ) ನಿಯಮಗಳು 2021ನ್ನು ಜಾರಿಗೊಳಿಸಲಾಗಿದೆ. ಜತೆಗೆ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಿಸಲು ರಾಜ್ಯ ಲೋಕಸೇವಾ ಆಯೋಗಗಳಿಂದ ನ್ಯಾಯಯುತ ಮತ್ತು ತ್ವರಿತ ನೇಮಕಾತಿ ಪ್ರಕ್ರಿ ಯೆಗಳು ನಡೆಯಬೇಕಿದೆ. ಯುಪಿಎಸ್‌ಸಿ ರೀತಿಯಲ್ಲಿ ಸಕಾಲಕ್ಕೆ ಫಲಿತಾಂಶ ಪ್ರಕಟಿಸಬೇಕಿದೆ. ಅದಕ್ಕಾಗಿ ಕರ್ನಾಟಕ ಲೋಕ ಸೇವಾ ಆಯೋಗವನ್ನು ಸದೃಢಗೊಳಿಸಲು ಹೆಚ್ಚಿನ ಸಂಪನ್ಮೂಲ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ತಂತ್ರಜ್ಞಾನ ಬಳಕೆ 

* ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ತರಬೇತಿ 
* ನೇಮಕಾತಿ ಪಾರದರ್ಶಕಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ 
* ನ್ಯಾಯಯುತ ತ್ವರಿತ ನೇಮಕಾತಿಗೆ ಕ್ರಮ 

click me!