ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಪೊಲೀಸ್ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದೆ. ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ವಿಸ್ತರಿಸಿದೆ.
ಬೆಂಗಳೂರು, (ಜೂನ್.26) : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಪೊಲೀಸ್ ಇಲಾಖೆಯ ಮಾಹಿಯ ಪ್ರಕಾರ, ಈ ಮೊದಲು ಕೆಎಸ್‌ಆರ್ ಪಿ ಮತ್ತು ಆರ್.ಎಸ್.ಐ ವೃಂದದ ಹುದ್ದೆಗಳಿಗೆ ಜುಲೈ 16 ರವರೆಗೆ ಅರ್ಜಿ ಸಲ್ಲಿಕೆ ಕೊನೆ ದಿನವಾಗಿತ್ತು.
undefined
ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜು. 18ಕ್ಕೆ ವಿಸ್ತರಿಸಲಾಗಿದೆ. ಇನ್ನು ಶುಲ್ಕ ಪಾವತಿಸಲು ಜು.21 ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಬಗ್ಗೆ ಧಾರವಾಡ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
36,261 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಕೈಗೊಳ್ಳಲಾಗಿದೆ. ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಅರ್ಹತಾ ಷರತ್ತುಗಳಲ್ಲಿ (ವಯೋಮಿತಿ ಸೇರಿದಂತೆ) ಯಾವುದೇ ಬದಲಾವಣೆಗಳಿರುವುದಿಲ್ಲ.
ಆರ್.ಎಸ್.ಐ (ಸಿಎಆರ್/ ಡಿಎಆರ್) 45 ಹುದ್ದೆಗಳು 16-ಜುಲೈ 2020 ರವರೆಗೆ, ವಿಶೇಷ .ಆರ್.ಎಸ್.ಐ (ಕೆ.ಎಸ್.ಆರ್.ಪಿ)40 ಹುದ್ದೆಗಳು,ಎಸ್.ಐ (ಕೆ.ಎಸ್.ಐ.ಎಸ್.ಎಫ್)51 ಹುದ್ದೆಗಳು ಹಾಗೂ ಪಿ.ಎಸ್.ಐ.(ವೈರ್‍ಲೆಸ್) 26 ಹುದ್ದೆಗಳಿಗೆ 18 ಜುಲೈ 2020 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.