Karnataka High Court Recruitment: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

Published : Dec 11, 2021, 05:55 PM IST
Karnataka High Court Recruitment: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಾಂಶ

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಕಾನೂನು ಪದವಿ ಪಡೆದ ಅರ್ಹರಿಂದ ಅರ್ಜಿ ಆಹ್ವಾನ ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು(ಡಿ.11): ಸರಕಾರಿ ಉದ್ಯೋಗ ಪಡೆಯುವ ಹಂಬಲ ಇರುವವರಿಗೆ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ (Karnataka High Court )  ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ರಾಜ್ಯ ಹೈ ಕೋರ್ಟ್​​  ಒಟ್ಟು 21 ಜಿಲ್ಲಾ ನ್ಯಾಯಾಧೀಶರ (District Court Judges ) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳ ಪೈಕಿ 18 ಬ್ಯಾಕ್​ಲಾಗ್ (Back log)​ ಹುದ್ದೆಗಳು ಮತ್ತು 3 ಹೊಸ ಹುದ್ದೆಗಳಿವೆ. 

ವಿದ್ಯಾರ್ಹತೆ: ಕರ್ನಾಟಕ ಹೈಕೋರ್ಟ್​​ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವವರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್‌ನಲ್ಲಿ ಅಥವಾ ಅಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಕಡಿಮೆ  ಇರದಂತೆ 7 ವರ್ಷಗಳಿಂದ ಅಡ್ವೋಕೇಟ್‌ ಆಗಿ ಪ್ರ್ಯಾಕ್ಟೀಸ್ ಮಾಡಿರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್‌ಸೈಟ್‌ https://recruitmenthck.kar.nic.in/hck/djr/home.php ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ವಯೋಮಿತಿ: ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಡಿಸೆಂಬರ್ 9 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 14, 2021 ಆಗಿದೆ. ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ , SC / ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 48 ವರ್ಷ. ಇತರೆ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ ಎರಡು ವರ್ಷ ಪ್ರೊಬೆಷನ್‌ ಅವಧಿ ಪೂರೈಸಬೇಕು. ಅಗತ್ಯವಿದ್ದಲ್ಲಿ ಪ್ರೊಬೆಷನ್‌ ಅವಧಿಯನ್ನು ಅಭ್ಯರ್ಥಿಗೆ ಮುಂದೂಡಲಾಗುತ್ತದೆ.

IOCL Recruitment 2021: 300 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್

ಅರ್ಜಿ ಶುಲ್ಕ ಮತ್ತು ವೇತನ: ಪೂರ್ವ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 51,500 ರೂ ನಿಂದ 63,070 ರೂ ವರೆಗೆ ವೇತನ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಪೂರ್ವ ಪರೀಕ್ಷೆಗೆ ಅರ್ಜಿ ಶುಲ್ಕ  500 ರೂ. ಮತ್ತು SC/ST ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. ಪೂರ್ವ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು  ಮುಖ್ಯ ಪರೀಕ್ಷೆ ತೆಗೆದುಕೊಳ್ಳಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1000 ಪಾವತಿಸಬೇಕು. ಮತ್ತು SC/ST ಅಭ್ಯರ್ಥಿಗಳು ರೂ.750 ಪಾವತಿಸಬೇಕು.

Guest Teacher Recruitment: ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ: ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ (Shimoga District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಪ್ರೊಸೆಸ್ ಸರ್ವರ್(Process Server) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕ (Last Date)ವಾಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್​ಸೈಟ್ https://districts.ecourts.gov.in/shivamogga-onlinerecruitment   ​​ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​/ ಶಿಕ್ಷಣ ಸಂಸ್ಥೆಯಿಂದ ಕಡ್ಡಾಯವಾಗಿ SSLC ಪಾಸಾಗಿರಬೇಕು. ಜೊತೆಗೆ ವಾಹನ ಚಾಲನೆಯ ಪರವಾನಗಿ(ಲೈಸೆನ್ಸ್​) ಇರುವವರಿಗೆ ಆದ್ಯತೆ ನೀಡಲಾಗುತ್ತದೆ.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!