Principals Recruitment ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ

By Suvarna News  |  First Published Mar 5, 2022, 7:47 PM IST

* ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ
* ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ
* ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಅಶ್ವತ್ಥನಾರಾಯಣ


ಬೆಂಗಳೂರು (ಮಾ.05): ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಪ್ರಭಾರಿ ಪ್ರಾಂಶುಪಾಲರಾಗಿ ಕೌನ್ಸೆಲಿಂಗ್ ಮೂಲಕ ನೇಮಕ (Principals Recruitment) ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ(Dr CN Ashwath Narayan) ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಹುದ್ದೆಗಳಲ್ಲಿ ಗ್ರೇಡ್-1 ದರ್ಜೆಯ 327 ಹುದ್ದೆಗಳು(Jobs) ಪದವಿ ಕಾಲೇಜುಗಳಲ್ಲಿ ಮತ್ತು ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ (Degree Colleges) ಲಭ್ಯವಿವೆ. ಈ ಹುದ್ದೆಗಳಲ್ಲಿ ಇದುವರೆಗೂ ಕಾರ್ಯ ನಿರ್ವಹಿಸುತ್ತಿದ್ದವರು ಫೆಬ್ರವರಿ ತಿಂಗಳಲ್ಲಿ ನಿವೃತ್ತರಾಗಿದ್ದಾರೆ. ಹೀಗಾಗಿ, ಕಾಲೇಜುಗಳಲ್ಲಿ ನಾಯಕತ್ವದ ಕೊರತೆ ಉಂಟಾಗಬಾರದೆಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

Tap to resize

Latest Videos

ಸರ್ಕಾರಿ ಹಾಗೂ ಖಾಸಗಿ ಜಾಬ್ಸ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಾಂಶುಪಾಲರ ಹುದ್ದೆ ಖಾಲಿ ಇರುವ ಕಾಲೇಜುಗಳ ವಿವರಗಳನ್ನು ಕೌನ್ಸೆಲಿಂಗ್ ಆರಂಭಿಸುವುದಕ್ಕೂ 15 ದಿನಗಳ ಮೊದಲೇ ಕಾಲೇಜು ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಪ್ರಭಾರಿ ನೇಮಕ ಪ್ರಕ್ರಿಯೆಯಲ್ಲೂ ಸೇವಾಜ್ಯೇಷ್ಠತೆಯ ಆಧಾರದ ಮೇಲೆಯೇ ಆಯ್ಕೆ ಶ್ರೇಣಿ ಉಪನ್ಯಾಸಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ಮಾತ್ರವೇ ಕೌನ್ಸಿಲಿಂಗಿಗೆ ಕರೆಯಲಾಗುವುದು. ಜತೆಗೆ, ಈ ಹುದ್ದೆಗೆ ಆಯ್ಕೆಯಾಗುವವರು ಬೋಧಿಸುವಂತಹ ವಿಷಯವು ಆಯಾ ಕಾಲೇಜಿನಲ್ಲಿ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. 

ಈ ಕಾಲೇಜುಗಳಿಗೆ ಕಾಯಂ ಪ್ರಾಂಶುಪಾಲರ ನೇಮಕ ಪ್ರಕ್ತಿಯೆಗೆ ಚಾಲನೆ ಸಿಕ್ಕಿದೆ. ಸದ್ಯದಲ್ಲೇ ಅದು ಕೂಡ‌ ನಡೆಯಲಿದೆ. ಅಲ್ಲಿಯವರೆಗೆ ಪ್ರಭಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕೌನ್ಸೆಲಿಂಗ್: 
ಸರಕಾರಿ ಕಾಲೇಜುಗಳ ಉಪನ್ಯಾಸಕರ  ವರ್ಗಾವಣೆ (Lecturers Transfer) ಪ್ರಕ್ರಿಯೆಯನ್ನು ಕೂಡ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಈ ಪ್ರಕ್ರಿಯೆ ಕೂಡ ಕೌನ್ಸೆಲಿಂಗ್ ಮೂಲಕವೇ ನಡೆಯಲಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ, ಇದು ನನೆಗುದಿಗೆ ಬಿದ್ದಿತ್ತು. ಈಗ ಈ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ  ಶಿಕ್ಷಕ ಹುದ್ದೆಗೆ ಮಾ.7 ಮತ್ತು 8ಕ್ಕೆ ನೇರ ಸಂದರ್ಶನ
ಬೆಂಗಳೂರು ಕೇಂದ್ರೀಯ ವಿದ್ಯಾಲಯ (kendriya vidyalaya bangalore) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 2022-23ನೇ ಸಾಲಿನ ಒಪ್ಪಂದದ ಆಧಾರದ ಮೇಲೆ ಬೋಧಕ ಮತ್ತು ಬೋಧಕೇತರ ಶಿಕ್ಷಕರ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದ್ದು, ಮಾರ್ಚ್ 7 ಮತ್ತು 8 ರಂದು  ವಿದ್ಯಾಲಯದ ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ.  ಹೆಚ್ಚಿನ ಮಾಹಿತಿ ಆಸಕ್ತರು ಅಧಿಕೃತ ವೆಬ್‌ಸೈಟ್ https://megcentre.kvs.ac.in/ ಗೆ ಭೇಟಿ ನೀಡಬಹುದು. 

ಭೋದಕ ಹುದ್ದೆಯಲ್ಲಿ PRT, TGT, PGT,ಯೋಗ ಶಿಕ್ಷಕ, ಕ್ರೀಡಾ ಶಿಕ್ಷಕ, ನೃತ್ಯ/ಸಂಗೀತ ಶಿಕ್ಷಕ, ವಿಶೇಷ ಶಿಕ್ಷಕ ಮತ್ತು ಬೋಧಕೇತರ ವಿಭಾಗದಲ್ಲಿ ಕಂಪ್ಯೂಟರ್ ಬೋಧಕ, ಸಲಹೆಗಾರರು, ನರ್ಸ್, ವೈದ್ಯರು, DEO,ಕ್ಲರ್ಕ್ ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರು ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ  ನಡೆಯುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಎಡ್‌  ಮಾಡಿರಬೇಕು. ಜೊತೆಗೆ ಸಂಬಂಧಿಸಿದ ಹುದ್ದೆಗೆ ತಕ್ಕಂತೆ ಆಯಾಯ ವಿಷಯದಲ್ಲಿ ಬಿಎ, ಬಿಎಸ್‌ಸಿ ಮಾಡಿರಬೇಕು. ಬೋಧಕೇತರ ಹುದ್ದೆಗೆ  ಬಿಇ, ಬಿಟೆಕ್, ಬಿಸಿಎ,ಬಿಎಸ್‌ಸಿ ಮಾಡಿರಬೇಕು. ಫಿಸಿಕಲ್ ಎಜುಕೇಶನ್ , ಮತ್ತು ಯೋಗ ಶಿಕ್ಷಣ ಪಡೆದಿರಬೇಕು.

click me!