Bagalkot District Court Recruitment 2022 ಒಟ್ಟು 54 ವಿವಿಧ ಹುದ್ದೆಗಳಿಗೆ ನೇಮಕಾತಿ

By Suvarna News  |  First Published Mar 25, 2022, 1:26 PM IST

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 54 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಉ ದಿನವಾಗಿದೆ.


ಬಾಗಲಕೋಟೆ (ಮಾ.25): ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ (Bagalkot District Court) 54 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ ಶ್ರೇಣಿ
ಶೀಘ್ರಲಿಪಿಗಾರರು ಗ್ರೇಡ್ ||| 13 ₹27650 - ₹52650
ಬೆರಳಚ್ಚುಗಾರರು   2 ₹21400 - ₹42000
ಬೆರಳಚ್ಚು ನಕಲುಗಾರರು 1 ₹21400 - ₹42000
ಆದೇಶ ಜಾರಿಕಾರರು 1 ₹19950 - ₹37900
ಸಿಪಾಯಿ   37  ₹17000 - ₹28950


ಶೈಕ್ಷಣಿಕ ಅರ್ಹತೆ
ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Tap to resize

Latest Videos

ಬೆರಳಚ್ಚುಗಾರರು ಹುದ್ದೆಗೆ 
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

CSIR NAL RECRUITMENT 2022: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ಬೆರಳಚ್ಚು ನಕಲುಗಾರರು ಹುದ್ದೆಗೆ 
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆದೇಶ ಜಾರಿಕಾರರು ಹುದ್ದೆಗೆ 
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸಿಪಾಯಿ ಹುದ್ದೆಗೆ 
10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ: 
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. 
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

SSLC 2022 EXAM ಹಾಲ್ ಗಳಲ್ಲಿ ಹಿಜಾಬ್‌ ಧರಿಸುವಂತಿಲ್ಲ: ಸಚಿವ ನಾಗೇಶ್

ಆಯ್ಕೆ ವಿಧಾನ :
ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಬೆರಳಚ್ಚು ನಕಲುಗಾರರು ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಸೇವಕ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022

click me!