ಬೆಂಗಳೂರು ನಗರ ವಿವಿಗೆ ಶೀಘ್ರವೇ 280 ಕಾಯಂ ಸಿಬ್ಬಂದಿ ನೇಮಕ: ಕುಲಪತಿ ಗಾಂಧಿ

By Suvarna News  |  First Published Jan 5, 2023, 9:26 PM IST

 ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಿಗೆ ಶೀಘ್ರದಲ್ಲೇ 160 ಬೋಧಕ ಹಾಗೂ 120 ಬೋಧಕೇತರ ಕಾಯಂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕುಲಪತಿ ಪ್ರೊ.ಲಿಂಗರಾಜ ಗಾಂಧಿ ತಿಳಿಸಿದ್ದಾರೆ. 


ಬೆಂಗಳೂರು (ಜ.5): ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಿಗೆ ಶೀಘ್ರದಲ್ಲೇ 160 ಬೋಧಕ ಹಾಗೂ 120 ಬೋಧಕೇತರ ಕಾಯಂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕುಲಪತಿ ಪ್ರೊ.ಲಿಂಗರಾಜ ಗಾಂಧಿ ತಿಳಿಸಿದ್ದಾರೆ. ವಿವಿಯಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಮಂಡಳಿಯ (ನ್ಯಾಕ್‌) ದೃಷ್ಟಿಕೋನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಂ.ನಗರ ವಿವಿಯನ್ನು ಮಾದರಿ ವಿಶ್ವವಿದ್ಯಾನಿಲಯವಾಗಿ ಬೆಳೆಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಆಡಳಿತ ಸುಧಾರಣೆಯ ಜೊತೆಗೆ ಶೈಕ್ಷಣಿಕ ಗುಣಮಟ್ಟಹೆಚ್ಚಳ ಮತ್ತು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಒಂದೂವರೆ ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಸೆಂಟ್ರಲ್‌ ಕಾಲೇಜಿನ ಪಾರಂಪರಿಕ ಕಟ್ಟಡಗಳ ಪುನರುಜ್ಜೀವನ ಕಾರ್ಯವು ಭರದಿಂದ ಸಾಗಿದೆ. ನೂತನ ಶೈಕ್ಷಣಿಕ ವಿಭಾಗ, ಕ್ರೀಡಾ ಸಂಕೀರ್ಣಗಳ ನಿರ್ಮಾಣ ಹಾಗೂ ಗ್ರಂಥಾಲಯ ಆಧುನೀಕರಣ ಕಾರ್ಯವೂ ಪ್ರಗತಿಯಲ್ಲಿದೆ. ಇದರ ಜತೆಗೆ ಅತಿ ಶೀಘ್ರದಲ್ಲೇ 160 ಬೋಧಕ ಮತ್ತು 120 ಬೋಧಕೇತರ ಕಾಯಂ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯು ಆರಂಭಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ನ್ಯಾಕ್‌ ಸಹಾಯಕ ಸಲಹೆಗಾರರಾದ ಡಾ. ವಿನಿತಾ ಸಾಹು ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಸಿ.ಎನ್‌.ಶ್ರೀಧರ, ಮೌಲ್ಯಮಾಪನ ಕುಲಸಚಿವ ಪ್ರೊ. ವಿ.ಲೋಕೇಶ, ವಿತ್ತಾಧಿಕಾರಿ ಜಿ.ಪಿ.ರಘು ಉಪಸ್ಥಿತರಿದ್ದರು.

15000 ಶಿಕ್ಷಕರ ನೇಮಕ: ಷರತ್ತಿನೊಂದಿಗೆ ಅಂತಿಮ ಪಟ್ಟಿಪ್ರಕಟ?
ಸರ್ಕಾರಿ ಶಾಲೆಗಳಿಗೆ 15000 ಪದವೀಧರ ಶಿಕ್ಷಕರ ನೇಮಕಾತಿ (6ರಿಂದ 8ನೇ ತರಗತಿ) ಪ್ರಕ್ರಿಯೆ ವಿಳಂಬ ತಪ್ಪಿಸಲು ಹೈಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನ ಮೇಲೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ ಶೀಘ್ರ ಅಂತಿಮ ಆಯ್ಕೆ ಪಟ್ಟಿಪ್ರಕಟಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

Latest Videos

undefined

ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಆದರೆ, ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವುದು ನಿಯಮಬಾಹಿರ ಎಂಬ ಕಾರಣ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯಿಂದ ಅಂತಹ ಅಭ್ಯರ್ಥಿಗಳನ್ನು ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಹಲವು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಬಗ್ಗೆ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ , ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನೂ ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಿ ಜತೆಗೆ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನೊಂದಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸೂಚಿಸಿದೆ.

CRPF RECRUITMENT 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 1458 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಗಾಗಿ ಎಲ್ಲ ಅಭ್ಯರ್ಥಿಗಳಿಂದ ಅಂತಿಮ ತೀರ್ಪಿಗೆ ಬದ್ಧವಾಗಿರುವ ಒಪ್ಪಂದಕ್ಕೆ ಸಹಿ ಪಡೆದು ಅಂತಿಮ ಆಯ್ಕೆ ಪಟ್ಟಿಪ್ರಕಟಿಸಿ ನೇಮಕಾತಿ ಆದೇಶ ನೀಡಲು ಇಲಾಖೆ ನಿರ್ಧರಿಸಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಮತ್ತೊಂದು ಟೆಕ್ ಕಂಪೆನಿಯಲ್ಲಿ ಉದ್ಯೋಗಿಗಳ ವಜಾ, 7,350 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದ SALESFORCE

ಏನಿದು ಪ್ರಕರಣ?:
15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ 2022ರ ಮಾಚ್‌ರ್‍ನಲ್ಲಿ ಅಧಿಸೂಚನೆ ಹೊರಡಿಸಿತ್ತು. 68 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಸಿಇಟಿಯಲ್ಲಿ 13 ಸಾವಿರ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಬಳಿಕ ಈ ಅಭ್ಯರ್ಥಿಗಳ ಸಿಇಟಿ ಅಂಕಗಳ ಜತೆಗೆ, ಶಿಕ್ಷಕರ ಅರ್ಹತಾ ಪರೀಕ್ಷೆ ಹಾಗೂ ಪದವಿ ಫಲಿತಾಂಶದ ನಿರ್ಧಿಷ್ಟಪ್ರಮಾಣದ ಫಲಿತಾಂಶ ಒಟ್ಟುಗೂಡಿಸಿ ತಾತ್ಕಾಲಿಕ ಪಟ್ಟಿಪ್ರಕಟಿಸಲಾಗಿತ್ತು. ಬಳಿಕ ಆ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ, ಮೀಸಲಾತಿ ಸೇರಿದಂತೆ ವಿವಿಧ ನಿಯಮಾವಳಿಗಳನ್ನು ಅನುಸರಿಸಿ 1.2, ನಂತರ 1:1 ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಸುಮಾರು 300ಕ್ಕೂ ಹೆಚ್ಚು ವಿವಾಹಿತ ಮಹಿಳಾ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟೆಗೆ ಅರ್ಹರಾದರೂ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಕಾರಣಕ್ಕೆ ವಂಚಿತರಾಗಿದ್ದರು. ಇದನ್ನು ಪ್ರಶ್ನಿಸಿ ಅವರು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

click me!