ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

By Web Desk  |  First Published Mar 8, 2019, 7:20 PM IST

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ 100 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ , ವಯೋಮಿತಿ, ನೀಡಲಾಗುವ ಸಂಬಳದ ಬಗ್ಗೆ ತಿಳಿಯಲು ಮುಂದೆ ಓದಿ.


ಬೆಂಗಳೂರು,[ಮಾ.08]: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ 100 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಕ್ಸಿಕ್ಯುಟೀಚ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟೀವ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯ್, ಸೆಕ್ಷನ್ ಇಂಜಿನಿಯರ್ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Tap to resize

Latest Videos

undefined

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 8.2019 ರೊಳಗೆ ಕಳುಹಿಸಬೇಕು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 8.2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಲು ಕೋರಲಾಗಿದೆ.

ವಯೋಮಿತಿ : ಎಕ್ಸಿಕ್ಯುಟೀವ್ ಇಂಜಿನಿಯರ್ ಹುದ್ದೆಗೆ 50, ಅಸಿಸ್ಟೆಂಟ್ ಎಕ್ಸಿಕ್ಯುಟೀವ್ ಇಂಜಿನಿಯರ್ ಹುದ್ದೆಗೆ 45, ಅಸಿಸ್ಟೆಂಟ್ ಇಂಜಿನಿಯ್ ಹುದ್ದೆಗೆ 40, ಸೆಕ್ಷನ್ ಇಂಜಿನಿಯರ್ ಹುದ್ದೆಗೆ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : 1.ಎಕ್ಸಿಕ್ಯುಟೀವ್ ಇಂಜಿನಿಯರ್ 80,000 ರೂ. 2.ಅಸಿಸ್ಟೆಂಟ್ ಎಕ್ಸಿಕ್ಯುಟೀವ್ ಇಂಜಿನಿಯರ್ 65,000 ರೂ., 3.ಅಸಿಸ್ಟೆಂಟ್ ಇಂಜಿನಿಯರ್ 50,000 ರೂ., 4.ಸೆಕ್ಷನ್ ಇಂಜಿನಿಯರ್ 36, 000 ರೂ. [ಪ್ರತಿ ತಿಂಗಳಿಗೆ] ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ
General Manager (HR)
Bangalore Metro Rail Corporation Limited
III Floor, BMTC Complex
K.H.Road, Shanthinagar
Bengaluru 560027.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!