Bangalore University Recruitment; ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

By Gowthami KFirst Published Sep 20, 2022, 4:56 PM IST
Highlights

ಬೆಂಗಳೂರು ವಿಶ್ವವಿದ್ಯಾನಿಲಯವು ಆರ್ಕಿಟೆಕ್ಚರ್ ವಿಭಾಗ ಮತ್ತು ಎಂಜಿನಿಯರಿಂಗ್‌ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಪೂರ್ಣ ಸಮಯ ಮತ್ತು ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.  ಸೆಪ್ಟೆಂಬರ್ 26 ಕ್ಕೂ ಮುನ್ನ ಅರ್ಜಿ ಸಲ್ಲಿಬೇಕು.

ಬೆಂಗಳೂರು (ಸೆ.20): ಬೆಂಗಳೂರು ವಿಶ್ವವಿದ್ಯಾನಿಲಯವು ಆರ್ಕಿಟೆಕ್ಚರ್ ವಿಭಾಗ ಮತ್ತು ಎಂಜಿನಿಯರಿಂಗ್‌ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಪೂರ್ಣ ಸಮಯ ಮತ್ತು ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022-23ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ bangaloreuniversity.ac.in ನಲ್ಲಿ  ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸಂಬಂಧಿತ ದಾಖಲೆಗಳ ಪ್ರತಿಗಳನ್ನು ಸೆಪ್ಟೆಂಬರ್ 26 ರಂದು ಅಥವಾ ಅದಕ್ಕೂ ಮೊದಲು ಆಯಾ ಇಲಾಖೆಗಳ  ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ. ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊರಡಿಸಿದ ಪ್ರಕಟಣೆಯಲ್ಲಿ, “ಆರ್ಕಿಟೆಕ್ಚರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ವಿಜ್ಞಾನ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬೋಧನೆ ಮಾಡಲು ಪೂರ್ಣ ಸಮಯದವರೆಗೆ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಅಧಿಕೃತ ವೆಬ್‌ ತಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬಹುದು.

AICTE ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಯಾಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌  bangaloreuniversity.ac.in ನಲ್ಲಿ ಅರ್ಜಿ ಸಲ್ಲಿಸಬಹುದು. 

ಅಭ್ಯರ್ಥಿಗಳು ಸಂಬಂಧಿತ ದಾಖಲೆಗಳ ಪ್ರತಿಗಳನ್ನು ಸೆಪ್ಟೆಂಬರ್ 26 ರಂದು ಅಥವಾ ಮೊದಲು ಆಯಾ ಇಲಾಖೆಗಳ ಅಧ್ಯಕ್ಷರಿಗೆ ಸಲ್ಲಿಸಬೇಕಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕದ ಬಗ್ಗೆ ತಿಳಿಸಲಾಗುತ್ತದೆ.

BHEL Recruitment 2022: ವಿವಿಧ 150 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಹ್ವಾನ
ಕಾರವಾರ: ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ 1 ಸಹಾಯಕ ಪ್ರಾಧ್ಯಾಪಕ (ದೈಹಿಕ ಶಿಕ್ಷಣ) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕ್ಷಣದಲ್ಲಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜತೆಗೆ ಎನ್‌ಇಟಿ ಅಥವಾ ದೈಹಿಕ ಶಿಕ್ಷಣದಲ್ಲಿ ಪಿಎಚ್‌ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಎರಡು ಪ್ರತಿಗಳು ಹಾಗೂ ವಿದ್ಯಾರ್ಹತೆಗೆ ಸಂಬಂಧಪಟ್ಟಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎಲ್ಲಾ ಧೃಢಿಕೃತ ಪ್ರತಿಗಳೊಂದಿಗೆ ಸೆ.27 ರಂದು ಬೆಳಗ್ಗೆ 11 ಗಂಟೆಗೆ ಅರಣ್ಯ ಮಹಾವಿದ್ಯಾಲಯ ಕಾರ್ಯಾಲಯದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ನೇಮಕಾತಿಯು ತಾತ್ಕಾಲಿಕ ಆಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸದೇ ತೆಗೆದುಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅರಣ್ಯ ಮಹಾವಿದ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಮಹಾವಿದ್ಯಾಲಯ ಡೀನ್‌ ಡಾ. ವಾಸುದೇವ್‌ ಆರ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

AAI RECRUITMENT 2022: ವಿಮಾನಯಾನ ಪ್ರಾಧಿಕಾರದಲ್ಲಿ ವಿವಿಧ 156 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರೌಢಶಿಕ್ಷಣ ಮಂಡಳಿ, ಪಿಯು ಮಂಡಳಿಗಳ ವಿಲೀನಕ್ಕೆ ಮಸೂದೆ
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಮಂಡಳಿಯನ್ನು ವಿಲೀನಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮಸೂದೆಯನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲೇ ಮಂಡನೆ ಮಾಡುವ ಸಾಧ್ಯತೆ ಇದೆ. ಎರಡೂ ಮಂಡಳಿಗಳನ್ನು ಒಗ್ಗೂಡಿಸಿ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ಎಂಬ ಒಂದೇ ಪರೀಕ್ಷಾ ಮಂಡಳಿಯನ್ನು ರಚಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

click me!