ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಮಹತ್ವದ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

By Ramesh B  |  First Published Mar 17, 2022, 4:11 PM IST

* ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಕರ್ನಾಟಕ ಸರ್ಕಾರ
*ಬಹುಕಾಲದ ಬೇಡಿಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದನೆ
* ಯಡಿಯೂರಪ್ಪ ಪತ್ರ ಬರೆದ ಬೆನ್ನಲ್ಲೇ ಮಹತ್ವದ ತೀರ್ಮಾನ


ಬೆಂಗಳೂರು, (ಮಾ.17): ಕೇಂದ್ರ ಸರ್ಕಾರಿ ನೌಕರು ಪಡೆಯುತ್ತಿರುವ ವೇತನಕ್ಕೆ ಸಮನಾಗಿ ಕರ್ನಾಟಕ ಸರ್ಕಾರಿ ನೌಕರರ ವೇತನ ಪರಿಷ್ಕಸಬೇಕೆಂಬ ಬಹುಕಾಲದ ಬೇಡಿಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ಸ್ಪಂದಿಸಿದ್ದು, 7ನೇ ವೇತನ ಆಯೋಗ (7th pay commission) ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

ಹೌದು...ಆಯೋಗ ರಚಿಸುವ ವಿಚಾರವನ್ನ ವಿಧಾನಸಭೆಯಲ್ಲಿ ಸಿಎಂ ಬುಧವಾರ ತಿಳಿಸಿದ್ದು, ಆದಷ್ಟು ಬೇಗ ಆಯೋಗ ರಚಿಸುತ್ತೇನೆ. ಅದು ನೀಡುವ ವರದಿ ಆಧರಿಸಿ ನೌಕರರ ವೇತನ ರಿಷ್ಕರಣೆ ಮಾಡುಲಾಗುವುದು ಎಂದು ಭರವಸೆ ನೀಡಿದರು.

Latest Videos

undefined

KPSC Recruitment 2022: ಔಷಧ ವಿಶ್ಲೇಷಕರು ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ

ನಾನು ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡದ ಕಾರಣ, ಸಂಘದ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿ ಬೇಡಿಕೆಯನ್ನು ಮುಂದಿಟ್ಟಿದ್ದರು. ಹಾಗಾಗಿ, ಆದಷ್ಟು ಬೇಗ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಆಯೋಗ ಇತರ ರಾಜ್ಯಗಳ ನೌಕರರ ವೇತನವನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಮಾಡಲಿದೆ ಎಂದು ವಿಧಾನಸಭೆಯಲ್ಲಿ ಬಜೆಟ್ ಚರ್ಚೆ ವೇಳೆ ಬೊಮ್ಮಾಯಿಯವರು ತಿಳಿಸಿದರು.

3.5 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, 4.5 ಲಕ್ಷ ಉದ್ಯೋಗಗಳನ್ನು ಹೊರಗುತ್ತಿಗೆಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌ಕೆ ಪಾಟೀಲ್‌ ಅವರು ಹೇಳಿದರು.

ಇದಕ್ಕೆ ಉತ್ತರಿಸಿದ ಸಿಎಂ, 77,000 ಕೌಶಲ್ಯರಹಿತ ಗ್ರೂಪ್-ಡಿ ಸಿಬ್ಬಂದಿ ಸೇರಿದಂತೆ ಸುಮಾರು 91,000 ಮಂದಿಯನ್ನು ಮಾತ್ರ ಹೊರಗುತ್ತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಹೊರಗುತ್ತಿಗೆ ಸಿಬ್ಬಂದಿಯನ್ನೇ ಮುಂದುವರಿಸಿದರೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಮೀಸಲಾತಿ ನಿರಾಕರಣೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ತತ್ವಕ್ಕೆ ವಿರುದ್ಧವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೌಕರರ ಪರವಾಗಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

7ನೇ ವೇತನ ಆಯೋಗದ ನಂತರ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ಪರಿಷ್ಕರಿಸುವಂತೆ ಒತ್ತಾಯಗಳು ಕೇಳಿ ಬಂದಿದ್ದವು. ಆದರೆ, ಈ ಬಗ್ಗೆ ಬಜೆಟ್ ನಲ್ಲಿ ಬೊಮ್ಮಾಯಿಯವರು ಯಾವುದೇ ಘೋಷಣೆಗಳನ್ನು ಮಾಡದೆ ನಿರಾಸೆ ಮೂಡಿಸಿದ್ದರು. ಇದೀಗ ಆಯೋಗ ರಚನೆ ಮಾಡುವುದಾಗಿ ತಿಳಿಸಿದ್ದು, ಸರ್ಕಾರದ ಈ ನಿರ್ಧಾರ ಇದೀಗ ನೌಕರರಲ್ಲಿ ಸಂತಸವನ್ನೂ ಮೂಡಿಸಿದೆ.

ಸರ್ಕಾರದ ಈ ಕ್ರಮದಿಂದ ಪ್ರಭಾವಿತರಾದ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ತಂಡ ಬುಧವಾರ ಸಂಜೆ ಸಿಎಂ ಅವರನ್ನು ಭೇಟಿ ಮಾಡಿ. ಅಭಿನಂದನೆ ಸಲ್ಲಿಸಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಶ್ರೇಣಿ, ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದರೆ ವಾರ್ಷಿಕ 10,656 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಈಗ ಖಾಲಿ ಇರುವ 2.58 ಲಕ್ಷ ಹುದ್ದೆಗಳಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 8,531 ಕೋಟಿ ಉಳಿತಾಯವಾಗುತ್ತಿದೆ. ಆದ್ದರಿಂದ ಸರ್ಕಾರಕ್ಕೆ ಹೆಚ್ಚುವರಿಯಾಗಿ 2,125 ಕೋಟಿ ಬೇಕಾಗುತ್ತದೆ. ಇದನ್ನಾಧರಿಸಿ ಪರಿಷ್ಕರಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸಿಎಂಗೆ ಮನವಿ ಮಾಡಿಕೊಂಡಿದ್ದರು. 

ಕೇಂದ್ರ ಸರ್ಕಾರ 2018ರಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳನ್ನಾಧಿರಿಸಿ ತನ್ನ ನೌಕರರ ವೇತನ ಭತ್ಯೆಗಳನ್ನ ಪರಿಷ್ಕರಿಸಿತ್ತು. ಇನ್ನು ಕರ್ನಾಟಕದಲ್ಲಿ 2017ರಲ್ಲಿ 6ನೇ ವೇತನ ಆಯೋಗ ರಚಿಸಲಾಗಿತ್ತು. ಆಯೋಗ ಮಾಡಿದ ಶಿಫಾರಸು ಆಧರಿಸಿ 2017 ಜುಲೈನಿಂದ ಅನ್ವಯಿಸಿ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆ ಮಾಡಲಾಗಿತ್ತು.
 

click me!