KPSC ಕೇಸ್‌: ಆರೋಪಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ, ಬೊಮ್ಮಾಯಿ

By Kannadaprabha NewsFirst Published Jan 28, 2021, 10:02 AM IST
Highlights

ಪ್ರಕರಣ ಸಂಬಂಧ ಈಗಾಗಲೇ ಕೆಲವು ಆರೋಪಿಗಳ ಬಂಧನ| ಆರೋಪಿಗಳಿಂದ ಲಭಿಸಿದ ಮಾಹಿತಿ ಆಧರಿಸಿ ತನಿಖೆ| ತನಿಖೆಯು ಮುಕ್ತ ಮತ್ತು ಪಾರದರ್ಶಕವಾಗಿ ನಡೆಯಲಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ| 

ಬೆಂಗಳೂರು(ಜ.28): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತದೆ. ಆರೋಪಿಗಳು ಅದೆಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಸಿಸಿಬಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾರನ್ನೂ ರಕ್ಷಣೆ ಮಾಡುವ ಅವಶ್ಯಕತೆ ಇಲ್ಲ. ಯಾರೇ ಆಗಿರಲಿ, ಎಷ್ಟೇ ಪ್ರಭಾವಶಾಲಿಗಳಾಗಿರಲಿ ಕಾನೂನು ಮೂಲಕವೇ ಕ್ರಮ ಜರುಗಿಸಲಾಗುತ್ತದೆ ಎಂದರು.

"

KPSC: ಎಫ್‌ಡಿಎ ಆಗಲು ಪ್ರಶ್ನೆ ಪತ್ರಿಕೆ ಪಡೆದ ಎಸ್‌ಡಿಎ..!

ಈ ಪ್ರಕರಣ ಸಂಬಂಧ ಈಗಾಗಲೇ ಕೆಲವು ಆರೋಪಿಗಳನ್ನು ಬಂಧನವಾಗಿದೆ. ಆರೋಪಿಗಳಿಂದ ಲಭಿಸಿದ ಮಾಹಿತಿ ಆಧರಿಸಿ ತನಿಖೆ ನಡೆಯಲಿದೆ. ಕಾನೂನಿನ ಪ್ರಕಾರ ಯಾರಿಗೆ ಶಿಕ್ಷೆ ಆಗಬೇಕೋ ಅದು ಆಗೇ ಆಗುತ್ತದೆ. ಈ ಪ್ರಕರಣವನ್ನು ತಾರ್ಕಿಕವಾಗಿ ಅಂತ್ಯ ಕಾಣಿಸಲಾಗುತ್ತದೆ. ತಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ಸೂಚಿಸಿದ್ದೇನೆ. ತನಿಖೆಯು ಮುಕ್ತ ಮತ್ತು ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 
 

click me!