ಬಿಬಿಎಂಪಿ ಸೇವೆ ಕಾಯಂ: 18,700 ಗುತ್ತಿಗೆ ಪೌರ ಕಾರ್ಮಿಕರಿಂದ ಅರ್ಜಿ ಸಲ್ಲಿಕೆ

By Gowthami K  |  First Published Feb 6, 2023, 3:46 PM IST

ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ  18,700 ಪೌರ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಾರೆ.


ಬೆಂಗಳೂರು (ಫೆ.6): ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಾರೆ. ಬಿಬಿಎಂಪಿಯ 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸಂಬಂಧ ಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುತ್ತಿರುವ 18,700 ಪೌರ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಪರಿಶೀಲಿಸಿ ಸರ್ಕಾರದ ನಿಗದಿ ಪಡಿಸಿದ ನಿಯಮ ಪ್ರಕಾರ ಅರ್ಹರನ್ನು ನೇಮಕಾತಿ ಸಮಿತಿ ಆಯ್ಕೆ ಮಾಡಲಾಗುವುದು. ಆಯ್ಕೆಗೆ ಸರ್ಕಾರವು ಬಿಬಿಎಂಪಿ ಮುಖ್ಯಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿದೆ ಎಂದು ಬಿಬಿಎಂಪಿ ಘನ ತ್ಯಾಜ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪೌರಕಾರ್ಮಿಕರಿಗೆ 17 ಸಾವಿರ ರು.ನಿಂದ 28,950 ರು. ವರೆಗೆ ವೇತನ ನಿಗದಿ ಪಡಿಸಲಾಗಿದೆ.

ಬಿಬಿಎಂಪಿ ಅಧಿಕಾರಿ, ನೌಕರರ ಸಾಮೂಹಿಕ ರಜೆ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.9ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ಮಾಡಲು ಬಿಬಿಎಂಪಿ ನೌಕರರು, ಅಧಿಕಾರಿಗಳು ನಿರ್ಧರಿಸಿದ್ದಾರೆ.

Latest Videos

undefined

ನಿಯಮಾವಳಿಯಂತೆ ಸಕಾಲದಲ್ಲಿ ಅಧಿಕಾರಿ, ನೌಕರರಿಗೆ ಸೌಲಭ್ಯ ಒದಗಿಸುತ್ತಿಲ್ಲ. ಪಾಲಿಕೆಯಲ್ಲಿ ವಿಲೀನಗೊಂಡಿರುವ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಆರೋಗ್ಯ ಕಾರ್ಡ್‌ ನೀಡುವುದಾಗಿ ಹೇಳಿ ಇದುವರೆಗೆ ನೀಡಿಲ್ಲ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೌಲಭ್ಯ ಪಡೆದುಕೊಳ್ಳಲು ಆಗುತ್ತಿಲ್ಲ. ಅನಾರೋಗ್ಯಕ್ಕೆ ಒಳಗಾದಾಗ ಬಿಬಿಎಂಪಿ ಆಸ್ಪತ್ರೆಗಳು ಮಾತ್ರವಲ್ಲದೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಮಾಡಿಕೊಡಬೇಕು. ಖಾಲಿ ಇರುವ ಎಲ್ಲ ವೃಂದದ ಮುಂಬಡ್ತಿ ನೀಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತರಾಜ್‌ ತಿಳಿಸಿದ್ದಾರೆ.

ಬೆಂಗಳೂರಿನ ಬಳ್ಳಾರಿ ರಸ್ತೆ ಕಾಮಗಾರಿ ವಿಳಂಬ ಆಗಬಾರದು: ಬಿಬಿಎಂಪಿಗೆ ಕೋರ್ಟ್ ತಾಕೀತು
ಬಳ್ಳಾರಿ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ನಿರಂತರವಾಗಿ ಪರಿಶೀಲಿಸಿ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿಗೆ ನಿರ್ದೇಶಿಸಿರುವ ಹೈಕೋರ್ಚ್‌, ಮುಂದಿನ ನಾಲ್ಕು ವಾರದಲ್ಲಿ ಕಾಮಗಾರಿ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿದೆ.

 

ಪಾಲಿಕೆ ವಿದ್ಯಾರ್ಥಿಗಳಿಗೆ ಸ್ವೆಟರ್‌ ಭಾಗ್ಯವಿಲ್ಲ: ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಮಕ್ಕಳಿಗೆ ಸ್ವೆಟರ್‌ ಕೊಡದ ಬಿಬಿಎಂಪಿ

‘ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ’ ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಬಳ್ಳಾರಿ ರಸ್ತೆ ಅಗಲೀಕರಣ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ಪೀಠ, ಬಿಬಿಎಂಪಿ ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕಾಮಗಾರಿ ನಡೆಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

Bengaluru: ಹೈ-ಟೆನ್ಷನ್‌ ಕೆಳಗೆ ಅನಧಿಕೃತ ಮಸೀದಿ ನಿರ್ಮಾಣ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮೋಹನ್ ಗೌಡ ಆಕ್ರೋಶ

ಬಿಬಿಎಂಪಿ ವಕೀಲರು, ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ವಿಳಂಬವಾಗುತ್ತಿದೆ ಎಂದು ವಿವರಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಬಿಬಿಎಂಪಿ ಹಿರಿಯ ಅಧಿಕಾರಿಗಳು ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕಾಮಗಾರಿ ಪ್ರಗತಿ ವರದಿಯನ್ನು ನಾಲ್ಕು ವಾರದಲ್ಲಿ ಸಲ್ಲಿಸುವಂತೆ ಸೂಚನೆ ನೀಡಿತು.

click me!