BDA Recruitment 2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ

By Suvarna NewsFirst Published Feb 9, 2022, 7:53 PM IST
Highlights

ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಬೆಂಗಳೂರು(ಫೆ.9 ): ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು (Bangalore Development Authority - BDA) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ (law officer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.bdabangalore.org/ ಗೆ ಭೇಟಿ ನೀಡಿ.

ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು ಇಂತಿದೆ.
-ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು.
-ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು.

ವೇತನ: ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  1,00,000 ರೂ ವೇತನ ದೊರೆಯಲಿದೆ.

ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್‌ ಪಶ್ಚಿಮ, ಬೆಂಗಳೂರು-560020.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

IISC RECRUITMENT 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇರ ಸಂದರ್ಶನ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.   ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಫೆಬ್ರವರಿ 11,2022ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ   ಹಿರಿಯ ಸಂಶೋಧನಾ ಅಭ್ಯರ್ಥಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

IIIT Bangalore Recruitment 2022: ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ ಮತ್ತು ವೇತನ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ವೇತನವನ್ನು ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 11,2022 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಡೀನ್ ಕಛೇರಿ (ಕೃಷಿ),
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

Bank of Maharashtra Recruitment 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

click me!