ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ: FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ!

Published : Oct 12, 2025, 07:25 PM IST
BDA office

ಸಾರಾಂಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ಹಲವು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು, ನಿಗದಿತ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯೊಂದಿಗೆ ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು (ಅ. 12): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿರುವ ಬಿಡಿಎ, ಒಟ್ಟು 18 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಥಮ ದರ್ಜೆ ಸಹಾಯಕ (FDA), ಕಂದಾಯ ನಿರೀಕ್ಷಕ ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಬೆಂಗಳೂರು ಕೇಂದ್ರಿತ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ನವೆಂಬರ್ 10, 2025 ರ ಮೊದಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಖಾಲಿ ಹುದ್ದೆಗಳ ವಿವರ:

ಬಿಡಿಎ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ, ಒಟ್ಟು 18 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ:

1. ಪ್ರಥಮ ದರ್ಜೆ ಸಹಾಯಕ (ಪ್ರಥಮ ದರ್ಜೆ ನ್ಯಾಯಾಲಯ ಗುಮಾಸ್ತ/ ಕಂದಾಯ ನಿರೀಕ್ಷಕ): 4 ಹುದ್ದೆಗಳು

2. ದ್ವಿತೀಯ ದರ್ಜೆ ಸಹಾಯಕ (SDA): 14 ಹುದ್ದೆಗಳು

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 38 ವರ್ಷ ವಯಸ್ಸಾಗಿರಬೇಕು. ಮೀಸಲಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗಳನ್ನು ನೀಡಲಾಗಿದೆ. 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಕೊಡಲಾಗಿದೆ. ಜೊತೆಗೆ SC/ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಅರ್ಜಿ ಶುಲ್ಕವನ್ನು ವರ್ಗವಾರು ನಿಗದಿಪಡಿಸಲಾಗಿದ್ದು, 2A, 2B, 3A, 3B ಅಭ್ಯರ್ಥಿಗಳಿಗೆ 750 ರೂ., SC/ST ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ. ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 250 ರೂ. ಇರುತ್ತದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (OMR), ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಬಿಡಿಎಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳು, ಶೈಕ್ಷಣಿಕ ದಾಖಲೆಗಳ ಸ್ಕ್ಯಾನ್ ಪ್ರತಿಗಳು ಮತ್ತು ಇತ್ತೀಚಿನ ಛಾಯಾಚಿತ್ರದೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ನಿಗದಿತ ಶುಲ್ಕವನ್ನು ಪಾವತಿಸಿ, ಅರ್ಜಿಯನ್ನು ಸಲ್ಲಿಸಿದ ನಂತರ ಪ್ರತಿಯನ್ನು ತೆಗೆದಿಟ್ಟುಕೊಳ್ಳುವುದು ಅತ್ಯಗತ್ಯ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 10, 2025.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!