BEL Recruitment 2022: ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

Published : Dec 31, 2021, 06:20 PM IST
BEL Recruitment 2022: ಬೆಂಗಳೂರಿನ BELನಲ್ಲಿ  ಟ್ರೈನಿ  ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಸಾರಾಂಶ

ಎಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿಗೆ BEL ಅರ್ಜಿ ಆಹ್ವಾನ ಖಾಲಿ ಇರುವ 8  ಟ್ರೈನಿ  ಎಂಜಿನಿಯರ್-1 ಹುದ್ದೆಗಳಿಗೆ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 15 , 2022

ಬೆಂಗಳೂರು(ಡಿ.24): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ  8 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜನವರಿ 15,2022ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಬಿಇಎಲ್  ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಶೇ.60 ರಷ್ಟು ಅಂಕಗಳೊಂದಿಗೆ  ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

BEL Recruitment 2022: ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂಗಳ ವರೆಗೆ ವೇತನ ಸಿಗಲಿದೆ. ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಜನವರಿ 15,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.

ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆ ಈ ಲಿಂಕ್ ಕ್ಲಿಕ್ ಮಾಡಿ ಓದಿ https://bel-india.in/Documentviews.aspx?fileName=ADVT%20TE%20ADSN-29-12-2021.pdf

South Indian Bank Recruitment 2022: ಸ್ಪೆಷಲಿಸ್ಟ್​ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಆಹ್ವಾನ

ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಬೆಂಗಳೂರು ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.  ಕಾಂಟ್ರ್ಯಾಕ್ಟ್ ಆಧಾರದ ಮೇಲೆ 10  ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ ಇಂತಿದೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಈ ವಿಳಾಸಕ್ಕೆ ಕಳುಹಿಸಿ ಕೊಡಿ. 
Sr. Dy. General Manager (HR)
Naval Systems SBU
Bharat Electronics Limited
Jalahalli Post
Bangalore - 560013, Karnataka.
ಅಧಿಸೂಚನೆಯನ್ನು ಓದಲು ಈ ಲಿಂಕ್  ಕ್ಲಿಕ್ ಮಾಡಿ : https://www.bel-india.in/Documentviews.aspx?fileName=web-ad%20for%20PE-I-21-12-21.pdf

PREV
Read more Articles on
click me!

Recommended Stories

ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್!
ಕೆಎಸ್‌ಸಿಸಿಎಫ್ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ, 34 ಸಹಾಯಕ ಹುದ್ದೆಗಳಿಗೆ ನೇಮಕಾತಿ!