ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 228 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಬೇಕಾದ ಅರ್ಹತೆಗಳು ಈ ಕೆಳಗಿನಂತಿದೆ.
ಬೆಂಗಳೂರು/ಬಳ್ಳಾರಿ [ಆ.04]: ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 228 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 02ರೊಳಗೆ ಅರ್ಜಿ ಸಲ್ಲಿಸಬಹುದು.
ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವ್ಯಾಪ್ತಿಯ 9 ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 57 ಅಂಗನವಾಡಿ ಕಾರ್ಯಕರ್ತೆ ಮತ್ತು 171 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಜಾಬ್ಸ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ [10ನೇ ತರಗತಿ] ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ