ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ 6 ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ.
ಬೆಂಗಳೂರು (ಮೇ.7): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಫೈರ್ ಇನ್‌ಸ್ಪೆಕ್ಟರ್ (Fire Inspector) ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ ಜೂನ್ 3 ಆಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://english.bmrc.co.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾಭ್ಯಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Sc, B.E ಅಥವಾ B.Tech ವಿದ್ಯಾರ್ಹತೆ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ONGC Recruitment 2022: ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ
ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 35 ವರ್ಷದ ಒಳಗಿರಬೇಕು.
ವೇತನ ವಿವರ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹40000 ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಜೂನ್ 3 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru-560027
Email: helpdesk@bmrc.co.in
VOCAL FOR LOCAL ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳಕ್ಕೆ ಮುಂದಾದ ರಾಜ್ಯ ಸರಕಾರ
ಹಿರಿಯ ಸಂಶೋಧನಾ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ರಿಸರ್ಚ್ ಫೆಲೋ (Senior Research Fellow) ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ (Project Associate) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:
ಹಿರಿಯ ಸಂಶೋಧನಾ ಫೆಲೋ: 2 ಹುದ್ದೆಗಳು
ಯೋಜನಾ ಸಹಾಯಕ: 2 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ಬಿಎಎಂಎಸ್ ಮಾಡಿರಬೇಕು. ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc ಮಾಡಿರಬೇಕು.