
ಬೆಂಗಳೂರು (ಮೇ 29): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ. ಬೆಂಗಳೂರು ಕೇಂದ್ರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 78 ಅಂಗನವಾಡಿ ಸಹಾಯಕಿಯರ ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಮಹಿಳಾ / ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಾಗಿ ಶಿಶು ಅಭಿವೃದ್ಧಿ ಮತ್ತು ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ, 3ನೇ ಕ್ರಾಸ್, ಕಬ್ಬಡಿ ಕ್ರೀಡಾಂಗಣದ ಹತ್ತಿರ, ಬಿ.ಬಿ.ಎಮ್.ಪಿ ಕಟ್ಟಡ, ಮೊದಲನೇ ಮಹಡಿ, ಗೋವಿಂದರಾಜನಗರ ಬೆಂಗಳೂರು-560040 ಇಲ್ಲಿ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 30ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23204490 ಹಾಗೂ ಮೊಬೈಲ್ ಸಂಖ್ಯೆ: 9901074633 ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಕೇಂದ್ರದದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.