ಬೆಂಗಳೂರು ಯುವ ಸಬಲೀಕರಣ, ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ: ಜ.23 ಕೊನೇ ದಿನ

By Sathish Kumar KH  |  First Published Jan 4, 2024, 11:29 PM IST

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹೊಸದಾಗಿ ಯುವಪರಿವರ್ತಕರು ಹಾಗೂ ಯುವಸಮಲೋಚಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಬೆಂಗಳೂರು (ಜ.04): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಮತ್ತು ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು, ಇವರಿಂದ ಅನುಷ್ಠಾನಗೊಂಡಿರುವ 'ಯುವ ಸ್ವಂದನ' ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವಪರಿವರ್ತಕರು ಹಾಗೂ ಯುವಸಮಲೋಚಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಯಾವುದೇ ಪದವಿ ಅಥವಾ ಮೇಲ್ಪಟ್ಟ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು 21 ರಿಂದ 35 ವರ್ಷದ ವಯೋಮಿತಿಯವರಾಗಿಬೇಕು. ಅಭ್ಯರ್ಥಿಗಳು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಜನವರಿ 23ರೊಳಗೆ ಸಹಾಯಕ ನಿರ್ದೇಶಕರು, ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಗೇಟ್ ನಂ.12, ಕೊಠಡಿ ಸಂಖ್ಯೆ: 17 ಮತ್ತು 18, ಬೆಂಗಳೂರು-01 ಇಲ್ಲಿ ಸಲ್ಲಿಸಬಹುದು.

Latest Videos

undefined

ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಅರ್ಜಿ ಆಹ್ವಾನ: ಜನವರಿ 5 ಕೊನೇ ದಿನ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 080-22239771 ಅಥವಾ 9480886545 ಮೂಲಕ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ನೋಂದಾಯಿಸಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಇನ್ನು ಅರ್ಹ ನಿರುದ್ಯೋಗಿ ಯುವಜನರು ಈ ಯೋಜನೆ ಲಾಭ ಪಡೆಯಲು ಅರ್ಹರಾಗಿದ್ದು, ನೋಂದಣಿ ಮಾಡಿಸುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಲಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ 2022-23ನೇ ಶೈಕ್ಷಣಿಕ ಸಾಲಿನಲ್ಲಿ  ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ 180 ದಿನ ಕಳೆದರೂ  ಉದ್ಯೋಗ  ಲಭಿಸದ ಪದವಿಧರ ನಿರುದ್ಯೋಗಿಗಳ  (ವೃತ್ತಿಪರ  ಕೋರ್ಸ್ ಗಳು ಸೇರಿದಂತೆ) ಅರ್ಹ ಅಭ್ಯರ್ಥಿಗಳಿಂದ  ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಪದವೀಧರ ಪಾಸಾದ ನಿರುದ್ಯೋಗ ಭತ್ಯೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಯವರೆಗೆ ನೀಡಲಾಗುತ್ತದೆ. ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಬ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಆರ್ಹರಾಗುವುದಿಲ್ಲ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯಲ್ಲಿ 400 ಹುದ್ದೆಗಳಿಗೆ ನೇಮಕಾತಿ

ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-599-9918 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!