ಹೊಲದಲ್ಲಿ ಬಂಡಿ ದಾರಿ ಮುಚ್ಚುವುದು ಅಕ್ರಮ: ಸರ್ಕಾರ

By Kannadaprabha News  |  First Published Oct 22, 2023, 1:43 PM IST

  ‘ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು’ ಎಂದು ಎಲ್ಲ ತಹಸೀಲ್ದಾರ್‌ಗಳಿಗೆ ಕಂದಾಯ ಇಲಾಖೆ ಸೂಚಿಸಿದೆ.


 ಬೆಂಗಳೂರು (ಅ.22) :  ‘ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು’ ಎಂದು ಎಲ್ಲ ತಹಸೀಲ್ದಾರ್‌ಗಳಿಗೆ ಕಂದಾಯ ಇಲಾಖೆ ಸೂಚಿಸಿದೆ.

ರಾಜ್ಯದಲ್ಲಿ ರೈತರು ಕೃಷಿ ಉದ್ದೇಶಕ್ಕೆ ಬಳಸುವ ಕೃಷಿ ಸಲಕರಣೆ ಸಾಗಿಸಲು, ಬೆಳೆ ಸಾಗಿಸಲು ಅನ್ಯ ಭೂ ಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಹಲವು ದೂರುಗಳು ಇಲಾಖೆಗೆ ಬಂದಿದ್ದು, ಗ್ರಾಮ ನಕಾಶೆ ಪ್ರಕಾರ ಗುರುತಿಸಿರುವ ಕಾಲುದಾರಿ, ಬಂಡಿದಾರಿಗಳಲ್ಲಿ ರೈತರು ಸಂಚರಿಸಲು ಯಾವುದೇ ಅಡ್ಡಿ ಮಾಡುವಂತಿಲ್ಲ. ಆದರೂ ಕೆಲ ಭೂ ಮಾಲೀಕರು ತಮ್ಮ ಭೂಮಿ ಮೂಲಕ ಹಾದು ಹೋಗಬೇಕಿರುವ ರೈತರಿಗೆ ತಿರುಗಾಡಲು ಅಡ್ಡಿಪಡಿಸುತ್ತಿದ್ದಾರೆ. ರಸ್ತೆ ಗುರುತಿಸಿರುವ ಜಾಗಗಳನ್ನು ಮುಚ್ಚಿಸುವುದು. ರೈತರು ಬಹುಕಾಲದಿಂದ ಬಳಸುವ ದಾರಿಗಳಲ್ಲಿ ತಿರುಗಾಡಲು ವೈಯಕ್ತಿಕ ದ್ವೇಷದಿಂದ ಅಡ್ಡಿಪಡಿಸುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Latest Videos

undefined

ಶಹಾಪುರದಲ್ಲಿ ಮಳೆ ಕೊರತೆ: ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಕರ್ನಾಟಕ ಭೂ ಕಂದಾಯ ನಿಯಮಗಳು 1996ರ ನಿಯಮ 59ರ ಅಡಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ’ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ದಾರಿ ಬಿಡಲು ಸಂಬಂಧಪಟ್ಟ ಜಮೀನುಗಳವರು ಒಪ್ಪಿದರೆ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದಿಸಲು ಅವಕಾಶವಿದೆ. ಇಂಡಿಯನ್‌ ಈಸ್‌ಮೆಂಟ್‌ ಆ್ಯಕ್ಟ್‌ -1882ರ ಪ್ರಕಾರ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (ಈಸ್‌ಮೆಂಟ್‌) ಹಕ್ಕನ್ನು ಹೊಂದಿದ್ದಾರೆ. ಇದಕ್ಕೆ ನೆರೆ ಹೊರೆಯ ಜಮೀನಿನವರು ಯಾವುದೇ ಧಕ್ಕೆ ತರುವಂತಿಲ್ಲ ಎಂದು ವಿವರಿಸಲಾಗಿದೆ.

ರೈತರಿಗೆ ಮಹತ್ವದ ಆದೇಶ: ಗ್ರಾಮ ನಕಾಶೆ ಡೌನ್ಲೋಡ್ ಮಾಡಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿ ತೆರವುಗೊಳಿಸಿ

ಇಂತಹ ಸಮಸ್ಯೆ ಬಗೆಹರಿಸಲು ತಾಲೂಕಿನ ತಹಸೀಲ್ದಾರ್‌ಗಳು ಕ್ರಮ ಕೈಗೊಳ್ಳಬೇಕು. ನಕಾಶೆ ಪ್ರಕಾರ ಇರುವ ಕಾಲು ದಾರಿ, ಬಂಡಿದಾರಿ ಅಥವಾ ಇತರೆ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸುವ ದಾರಿಯನ್ನು ಮುಚ್ಚಿರುವ ಪ್ರಕರಣ ಕಂಡು ಬಂದರೆ ಕೂಡಲೇ ತೆರವುಗೊಳಿಸಬೇಕು ಎಂದು ಕಂದಾಯ ಇಲಾಖೆ (ಭೂ ಮಂಜೂರಾತಿ) ಅಧೀನ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.

click me!