BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿದೆ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ

By Suvarna News  |  First Published Feb 5, 2022, 3:14 PM IST

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆನ್​​​ಲೈನ್  ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. 


ಬೆಂಗಳೂರು(ಫೆ.5): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ  ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಮುಖ್ಯ ಇಂಜಿನಿಯರ್ (Chief Engineer) ​ ಮತ್ತು ಸಹಾಯಕ​ ಮ್ಯಾನೇಜರ್ (Assistant Manager-Property Development)​ಸೇರಿ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೇ ದಿನ ಫೆ.22 ಆಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್​ಸೈಟ್​ https://english.bmrc.co.in/ ಗೆ ಭೇಟಿ ನೀಡಬಹುದು.

ಒಟ್ಟು 10 ಹುದ್ದೆಗಳ ಮಾಹಿತಿ
ಮುಖ್ಯ ಇಂಜಿನಿಯರ್ - 4 ಹುದ್ದೆಗಳು
ಸಹಾಯಕ ಮ್ಯಾನೇಜರ್​ (ಆಸ್ತಿ ಅಭಿವೃದ್ಧಿ) - 6 ಹುದ್ದೆಗಳು

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗನುಸಾರವಾಗಿ ಓದಿರಬೇಕು.
ಮುಖ್ಯ ಇಂಜಿನಿಯರ್ ಹುದ್ದೆಗೆ  ಬಿಇ/ಬಿ.ಟೆಕ್ ಅಥವಾ ಇದಕ್ಕೆ ಸಮಾನವಾದ ಪದವಿಯನ್ನು ಪ್ರತಿಷ್ಠಿತ ಸಂಸ್ಥೆಯಿಂದ ಪಡೆದು, ಕನಿಷ್ಠ 18 ವರ್ಷಗಳ ಉದ್ಯೋಗ ಅನುಭವ ಇರಬೇಕು.

ಸಹಾಯಕ ಮ್ಯಾನೇಜರ್​ ಹುದ್ದೆಗೆ MBA (ಮಾರ್ಕೆಟಿಂಗ್/ ಸೇಲ್ಸ್/ ಫೈನಾನ್ಸ್) ಅಥವಾ ಅರ್ಥಶಾಸ್ತ್ರ/ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು. ಇದು ಪೂರ್ಣಸಮಯದ ವಿದ್ಯಾಭ್ಯಾಸವಾಗಿರಬೇಕು.

COGNIZANT HIRING FRESHERS: 50 ಸಾವಿರ ಫ್ರೆಶರ್‌ಗಳ ನೇಮಕಕ್ಕೆ ಮುಂದಾದ ಕಾಗ್ನಿಜೆಂಟ್

ಮಾಸಿಕ ವೇತನ: ಮುಖ್ಯ ಇಂಜಿನಿಯರ್​​ಗೆ ತಿಂಗಳಿಗೆ ಎಲ್ಲ ಭತ್ಯೆ ಸೇರಿ 1.50 ಲಕ್ಷ ರೂ.ವೇತನವಿದ್ದರೆ, ಸಹಾಯಕ ಮ್ಯಾನೇಜರ್​ಗೆ ತಿಂಗಳಿಗೆ 50 ಸಾವಿರ ರೂ.ಸಂಬಳವಿದೆ.

ಆಯ್ಕೆ ಪ್ರಕ್ರಿಯೆ: ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್​ಲೈನ್​ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್​
ಕೆ.ಹೆಚ್​. ರಸ್ತೆ , ಶಾಂತಿನಗರ
ಬೆಂಗಳೂರು-560027

Kalaburagi Udyoga Mela 2022 : ಫೆಬ್ರವರಿ 12ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ 

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (Karnataka Skill Development Corporation) ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ (Kalaburagi) ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ (PDA Engineering college) ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು (Udyoga Mela) ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.

ಪ್ರಮುಖ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ನಕಲಿ ಪ್ರತಿ, 2 ಫೋಟೋ, ಆಧಾರ್ ಕಾರ್ಡ್ ಹಾಗೂ ಐದು ಸೆಟ್ ಸ್ವವಿವರದ ಅರ್ಜಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಳು, ವಯೋಮಿತಿ, ವೇತನ ಮತ್ತು ಉದ್ಯೋಗದ ಸಂಪೂರ್ಣ ವಿವರಗಳನ್ನು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ : 8277895931

ಉದ್ಯೋಗ ಮೇಳ ನಡೆಯುವ ಸ್ಥಳ : ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಐವನ್ನ-ಎ-ಶಾಹಿ, ಶಂಭೋಜಿನಲ್ಲಿ, ಕಲಬುರ್ಗಿ-585102

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು https://skillconnect.kaushalkar.com/app/gulbarga-jobfair?utm_source=DH-MoreFromPub&utm_medium=DH-app&utm_campaign=DH ಲಿಂಕ್ ಬಳಸಿ ತಮ್ಮ ಹೆಸರನ್ನು ಈ ಕೂಡಲೇ ನೊಂದಾಯಿಸಿಕೊಳ್ಳಿ. ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ksdc.recruitment@gmail.com ವಿಳಾಸಕ್ಕೆ ಮೇಲ್ ಕೂಡ ಮಾಡಬಹುದು.

click me!