ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಖಾಲಿ ಇರುವ 300 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 30, ಕೊನೆಯ ದಿನವಾಗಿದೆ.
ಬೆಂಗಳೂರು (ಮಾ.2): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (Bangalore Metropolitan Transport Corporation - BMTC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 300 ಅಪ್ರೆಂಟಿಸ್ (Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 30ರ ಒಳಗೆ https://www.apprenticeshipindia.gov.in/ ಮೂಲಕ ನೋಂದಾವಣಿ ಮಾಡಿಕೊಳ್ಳಬೇಕು. ಬಳಿಕ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲೆಗಳ ಜೊತೆ ಮಾರ್ಚ್ 30ರಂದು ಸಂಜೆ 5 ಗಂಟೆಯ ಒಳಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ತರಬೇತಿ ಕೇಂದ್ರ , 2ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಬೆಂಗಳೂರು - 560027 ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ mybmtc.karnataka.gov.in/ ಗೆ ಭೇಟಿ ನೀಡಲು ಕೋರಲಾಗಿದೆ.
ಹುದ್ದೆಯ ವಿವರ:
ಮೆಕಾನಿಕ್ ಡೀಸೆಲ್: 250 ಹುದ್ದೆಗಳು
ಪಿಟ್ಟರ್: 50 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ಅಥವಾ ಐಟಿಐ ಪಾಸಾಗಿರಬೇಕು.
Bank of Baroda recruitment 2022: ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 16 ವರ್ಷ ಮತ್ತು ಗರಿಷ್ಠ 26 ವರ್ಷದೊಳಗಿರಬೇಕು
ತರಬೇತಿ ಭತ್ಯೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ 6000 ರೂ. ರಿಂದ 7000 ರೂ. ವರೆಗೆ ತರಬೇತಿ ಭತ್ಯೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ಡಾಕ್ಯುಮೆಂಟ್ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ : ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 17,000 ರಿಂದ ರೂ. 28,950 ವೇತನ ಪಡೆಯಲಿದ್ದಾರೆ.
ಆಯ್ಕೆ ವಿಧಾನ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.