ಸಿಎಂ ಬೊಮ್ಮಾಯಿಗೊಂದು ಪತ್ರ ಬರೆದ ಯಡಿಯೂರಪ್ಪ. ಮಹತ್ವದ ಮನವಿ

Published : Mar 03, 2022, 01:51 PM IST
ಸಿಎಂ ಬೊಮ್ಮಾಯಿಗೊಂದು  ಪತ್ರ ಬರೆದ ಯಡಿಯೂರಪ್ಪ. ಮಹತ್ವದ ಮನವಿ

ಸಾರಾಂಶ

* ಚೊಚ್ಚಲ ಬಜೆಟ್ ಮಂಡನೆಗೆ ಬಸವರಾಜ ಬೊಮ್ಮಾಯಿ ಸಿದ್ಧತೆ  * ಸಿಎಂ ಬೊಮ್ಮಾಯಿಗೊಂದು  ಪತ್ರ ಬರೆದ ಯಡಿಯೂರಪ್ಪ * ಸರ್ಕಾರಿ ನೌಕರರ ಬಗ್ಗೆ ಮಹತ್ವದ ಮನವಿ ಮಾಡಿಕೊಂಡ ಬಿಎಸ್‌ವೈ

ಬೆಂಗಳೂರು, (ಮಾ.03): ದೊಡ್ಡ ಪ್ರಮಾಣದ ಸಾಲದ ಹೊರೆ, ಕೇಂದ್ರದಿಂದ ಬರಬೇಕಾದ ಸಹಾಯ ಧನದಲ್ಲಿ ಖೋತಾ, ಮತ್ತೊಂದು ಕಡೆ ಮುಂದಿನ ವರ್ಷ ಎದುರಾಗಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರ ಮನ ಗೆಲ್ಲಲು ಜನಪ್ರಿಯ ಕಾರ್ಯಕ್ರಮಗಳಿರುವ ಬಜೆಟ್‌(Budget) ಮಂಡಿಸಲೇಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಇದ್ದಾರೆ

ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಪತ್ರ ಬರೆದಿದ್ದು, ಮಹತ್ವದ ಮನವಿ ಮಾಡಿಕೊಂಡಿದ್ದಾರೆ.

Karnataka Budget: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ?

ಹೌದು..ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಮಿತಿ ರಚಿಸಿ ಎಂದು ಪತ್ರದ ಮೂಲಕ ಯಡಿಯೂರಪ್ಪ ಅವರು ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ 2016ರಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳನ್ನಾಧರಿಸಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ದೇಶದ 28 ರಾಜ್ಯಗಳಲ್ಲೂ ಈಗಾಗಲೇ 25 ರಾಜ್ಯಗಳಲ್ಲಿ ಈ ಮಾದರಿ ಜಾರಿಯಲ್ಲಿದೆ ಎಂದು ಮನವರಿಕೆ ಮಾಡಿದ್ದಾರೆ.

ದೇಶದ ಜಿಎಸ್‍ಡಿಪಿಯನ್ನು ಅವಲೋಕಿಸಿದರೆ ರಾಜ್ಯ ಸರ್ಕಾರವು ಅಭಿವೃದ್ಧಿ, ಪ್ರಗತಿ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರದಲ್ಲಿ ಆರನೆ ಸ್ಥಾನದಲ್ಲಿದೆ. ಈ ಪ್ರಗತಿಗೆ ಸರ್ಕಾರಿ ನೌಕರರ ಸೇವೆ ಹಾಗೂ ಅವರ ಪಾತ್ರವು ಪ್ರಮುಖವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರು ಈ ಹಿಂದೆ ಕೋವಿಡ್ ಮೊದಲನೆ ಮತ್ತು ಎರಡನೆ ಅಲೆ ಸಂದರ್ಭದಲ್ಲಿ ತಮ್ಮ ಕುಟುಂಬ ಹಾಗೂ ಜೀವದ ಹಂಗು ತೊರೆದು ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಅವರ ದಕ್ಷತೆ ಹಾಗೂ ನಿಸ್ವಾರ್ಥ ಸೇವೆಯಿಂದಲೇ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರಲು ಸಾಧ್ಯವಾಯಿತು.

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಿದ್ದು, ಲಸಿಕೆ ವಿತರಣೆ, ಸೋಂಕಿತರಿಗೆ ಚಿಕಿತ್ಸೆ, ನಿರ್ವಹಣೆ ಸೇರಿದಂತೆ ಪ್ರತಿಯೊಂದರಲ್ಲೂ ಅವರ ಸೇವೆಯನ್ನು ಮರೆಯಲು ಸಾಧ್ಯವೇ ಇಲ್ಲ. ಇದರ ಪರಿಣಾಮವೇ ರಾಜ್ಯಕ್ಕೆ ದೇಶದಲ್ಲೇ ಉತ್ತಮ ಹೆಸರು ಬಂದಿದೆ ಎಂದು ಪ್ರಶಂಸಿಸಿದ್ದಾರೆ.

ಆರೋಗ್ಯ ಸೇವೆ ಸೇರಿದಂತೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಈಗ ವೇತನ ಪರಿಷ್ಕರಣೆ ಅಗತ್ಯವಾಗಿರುವುದರಿಂದ ನಾಳಿನ ಬಜೆಟ್‍ನಲ್ಲಿ ನೌಕರರ ಸಂಘದ ಮನವಿಯಂತೆ ವೇತನ ಸಮಿತಿಯನ್ನು ರಚಿಸಬೇಕೆಂದು ಬಿಎಸ್‍ವೈ ಪತ್ರಿಕಾ ಪ್ರಕಟಣೆಯಲ್ಲಿ ಸಿಎಂಗೆ ಮನವಿ ಮಾಡಿದ್ದಾರೆ.

ಚೊಚ್ಚಲ ಬಜೆಟ್‌ ಮಂಡನೆಗೆ ಬೊಮ್ಮಾಯಿ ಸಿದ್ಧತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶುಕ್ರವಾರ ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್‌(Budget) ಮಂಡನೆ ಮಾಡಲಿದ್ದು, ಮುಖ್ಯವಾಗಿ ಐದು ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುವ ಅಭಿವೃದ್ಧಿಪರ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಪನ್ಮೂಲ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ. ಕೊರೋನಾ(Coronavirus) ಲಾಕ್‌ಡೌನ್‌(Lockdown), ಪ್ರವಾಹ(Flood) ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೊಡ್ಡ ಪ್ರಮಾಣದ ಸಾಲದ ಹೊರೆ, ಕೇಂದ್ರದಿಂದ ಬರಬೇಕಾದ ಸಹಾಯ ಧನದಲ್ಲಿ ಖೋತಾ, ಮತ್ತೊಂದು ಕಡೆ ಮುಂದಿನ ವರ್ಷ ಎದುರಾಗಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರ ಮನ ಗೆಲ್ಲಲು ಜನಪ್ರಿಯ ಕಾರ್ಯಕ್ರಮಗಳಿರುವ ಬಜೆಟ್‌(Budget) ಮಂಡಿಸಲೇಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಇದ್ದಾರೆ.

ರಾಜ್ಯದಲ್ಲಿ(Karnataka) ಆರ್ಥಿಕ ಚಟುವಟಿಕೆಗಳು ಬಹುತೇಕ ಸಾಮಾನ್ಯ ಸ್ಥಿತಿಗೆ ಬಂದಿವೆ. ತೆರಿಗೆ ಸಂಗ್ರಹ ಸಹ ಕೂಡ ನಿಧಾನವಾಗಿ ಏರಿಕೆಯಾಗುತ್ತಿದೆ. ಆದರೆ ಕೋವಿಡ್‌(Covid-19) ಕಾರಣದಿಂದ ಜಾರಿಗೆ ತಂದ ಲಾಕ್‌ಡೌನ್‌, ನಿರ್ಬಂಧಗಳು ರಾಜ್ಯದ ಬೊಕ್ಕಸಕ್ಕೆ ಸಾಕಷ್ಟು ಹಾನಿ ಮಾಡಿವೆ. ಹೀಗಾಗಿ ಸಹಜವಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಈ ಹಿಂದಿನ ಬಜೆಟ್‌ಗಳಲ್ಲಿ ಘೋಷಿಸಿದ ಅನೇಕ ಯೋಜನೆ, ಕಾರ್ಯಕ್ರಮಗಳಿಗೆ ಈಗ ಹಣ ಬಿಡುಗಡೆ ಮಾಡುವಂತಹ ಪರಿಸ್ಥಿತಿ ಇದೆ.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!