C.V. Raman Hospital Recruitment 2022: ಖಾಲಿ ಇರುವ Pharmacist ಮತ್ತು Staff Nurse ಹುದ್ದೆಗೆ ನೇರ ಸಂದರ್ಶನ

By Suvarna News  |  First Published Dec 28, 2021, 2:34 PM IST
  • ಖಾಲಿ ಇರುವ ಹುದ್ದೆ ಭರ್ತಿಗೆ  ಮುಂದಾದ ಸಿ.ವಿ.ರಾಮನ್​ ಆಸ್ಪತ್ರೆ 
  • ಸ್ಟಾಫ್​ ನರ್ಸ್  ಮತ್ತು ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ
  • ಜನವರಿ 5 ರಂದು ನಡೆಯಲಿದೆ ನೇರ ಸಂದರ್ಶನ

ಬೆಂಗಳೂರು(ಡಿ.28): ಸರ್ ಸಿ.ವಿ.ರಾಮನ್​ ಜನರಲ್ ಆಸ್ಪತ್ರೆ (Sir C.V.Raman General Hospital) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.  ಫಾರ್ಮಾಸಿಸ್ಟ್ (Pharmacist)​ ಮತ್ತು ಸ್ಟಾಫ್​ ನರ್ಸ್ (Staff Nurse)​ ಹೀಗೆ ಒಟ್ಟು 2  ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನೇರ ಸಂದರ್ಶನದ (Walk-in-Interview) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಜನವರಿ 5, 2022ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ  ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ karnataka.gov.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ಶೈಕ್ಷಣಿಕ ವಿದ್ಯಾರ್ಹತೆ: ಸರ್ ಸಿ.ವಿ.ರಾಮನ್​ ಜನರಲ್ ಆಸ್ಪತ್ರೆಯಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಫಾರ್ಮಾ, ಡಿ.ಫಾರ್ಮಾ ಮಾಡಿರಬೇಕು. ಮತ್ತು ಸ್ಟಾಫ್​ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್​, GNM ಮಾಡಿರಬೇಕು.

Tap to resize

Latest Videos

undefined

ಅನುಭವ: ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಸ್ಟಾಫ್​ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 2 ವರ್ಷ  ಕೆಲಸ ಮಾಡಿದ ಅನುಭವ ಹೊಂದಿರಬೇಕು. 

ವೇತನ ಮತ್ತು ವಯೋಮಿತಿ: ಫಾರ್ಮಾಸಿಸ್ಟ್​ ಮತ್ತು ಸ್ಟಾಫ್​ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 60 ವರ್ಷ ಮೀರಿರಬಾರದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  13,000 ರೂ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಫಾರ್ಮಾಸಿಸ್ಟ್​ ಮತ್ತು ಸ್ಟಾಫ್​ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:
ಸರ್​ ಸಿ.ವಿ.ರಾಮನ್​ ಜನರಲ್ ಆಸ್ಪತ್ರೆ
ಇಂದಿರಾನಗರ
ಬೆಂಗಳೂರು-560038

NTPC RECRUITMENT 2022: ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 1.2 ಲಕ್ಷ ವೇತನ

Msc ಆದವರಿಗೆ ಕನ್ನಡ ಸ್ಪಷ್ಟವಾಗಿ ಬರೆಯಲು ಬಂದರೆ ನಿಮ್ಹಾನ್ಸ್​​ನಲ್ಲಿ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಜೂನಿಯರ್ ರಿಸರ್ಚ್​​ ಫೆಲೋ (Junior Research Fellow) ಹುದ್ದೆ ಖಾಲಿ ಇದ್ದು, ಎಂಎಸ್ಸಿ (MSc), ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಡಿಸೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು. ಜನವರಿ 2, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಡಿಯಾಲಜಿ ಮತ್ತು ಸ್ಪೀಚ್​ & ಲಾಂಗ್ವೇಜ್​ ಫೆಥಾಲಜಿಯಲ್ಲಿ ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಾತ್ರವಲ್ಲ ಕನ್ನಡ ಭಾಷೆಯನ್ನು  ಓದಲು ಮತ್ತು ಬರೆಯಲು ಮಾತನಾಡಲು ಬರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ- pradaud@gmail.com ಗೆ ಜನವರಿ 2, 2022ರೊಳಗೆ ಕಳುಹಿಸಲು ಕೋರಲಾಗಿದೆ.

click me!