3,479 ಶಿಕ್ಷಕ ಹುದ್ದೆಗೆ ನೇಮಕಾತಿ ಶುರು, ಕೂಡಲೇ ಅರ್ಜಿ ಹಾಕಿ

By Suvarna News  |  First Published Mar 27, 2021, 5:55 PM IST

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ದೇಶಾದ್ಯಂತ ಖಾಲಿ ಇರುವ 3000ಕ್ಕೂ ಅಧಿಕ ಶಿಕ್ಷಕ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಲಿದೆ. ಈ ಸಂಬಂಧ ಸಚಿವಾಲಯವು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 1ರಿಂದ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.


ಸರ್ಕಾರಿ ಶಾಲೆಯ ಶಿಕ್ಷಕರಾಗಬೇಕು ಅಂತ ಕಾಯ್ತಿರೋರಿಗೆ ಗುಡ್‌ನ್ಯೂಸ್. ಕೇಂದ್ರ ಸರ್ಕಾರದಡಿ ಉದ್ಯೋಗ ಮಾಡುವಂತಹ ಅವಕಾಶವೊಂದು ಬಂದಿದೆ. ದೇಶಾದ್ಯಂತ ಖಾಲಿಯಿರುವ ೩,೪೭೯ ಶಿಕ್ಷಕ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವುದಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ದೇಶಾದ್ಯಂತ ೧೭ ರಾಜ್ಯಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಿನ್ಸಿಪಾಲ್, ವೈಸ್ ಪ್ರಿನ್ಸಿಪಾಲ್, ಸ್ನಾತಕೋತ್ತರ ಪದವೀಧರ ಶಿಕ್ಷಕ (ಪಿಜಿಟಿ )ಹಾಗೂ ತರಬೇತಿ ಪಡೆದ ಪದವೀಧರ ಶಿಕ್ಷಕ (ಟಿಜಿಟಿ) ಹುದ್ದೆಗಳಿಗೆ ನಿಯೋಜಿಸಲಾಗುತ್ತದೆ. ಏಕಲವ್ಯ ಮಾದರಿ ವಸತಿ ಶಾಲೆಗಳು, ದೇಶದ ಬುಡಕಟ್ಟು ಪ್ರದೇಶಗಳಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ. ಹೆಚ್ಚಿನ ಮಾಹಿತಿಗೆ ಕೇಂದ್ರ ಸರ್ಕಾರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ಗೆ  ಭೇಟಿ ನೀಡಿ.

Latest Videos

undefined

ಬ್ಯಾಂಕ್ ಆಫ್ ಮಹಾರಾಷ್ಟ್ರದ ಜನರಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ  ಏಪ್ರಿಲ್ ೧ ರಿಂದ ಲಿಂಕ್ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್  30 ಕೊನೆಯ ದಿನವಾಗಿದೆ. ಜೂನ್ ಮೊದಲನೇ ವಾರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.

ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಸಂಬಂಧ ಕೇಂದ್ರ ಸರ್ಕಾರವು 2021ರ ಮಾರ್ಚ್ 26ರಂದು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. 2021ರ ಏಪ್ರಿಲ್ 1ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನವಾಗಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.



ಕೇಂದ್ರ ಸರ್ಕಾರವು ಒಠ್ಟು 3479 ಹುದ್ದೆಗಳಿಗೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಪೈಕಿ ಪ್ರಿನ್ಸಿಪಾಲ್ 175, ವೈಸ್ ಪ್ರಿನ್ಸಿಪಾಲ್ 116, ಸ್ನಾತಕೋತ್ತರ ಪದವೀಧರ ಶಿಕ್ಷಕ 1244, ತರಬೇತಿ ಪಡೆದ ಪದವೀಧರ ಶಿಕ್ಷಕ 1944 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಎನ್ಐಎಫ್‌ಟಿನಲ್ಲಿ ಪ್ರೊಫೆಸರ್ ಹುದ್ದೆ, 70 ಸಾವಿರ ರೂ.ವರೆಗೂ ವೇತನ

೧೭ ರಾಜ್ಯಗಳಲ್ಲೂ ಪ್ರಿನ್ಸಿಪಾಲ್, ವೈಸ್ ಪ್ರಿನ್ಸಿಪಾಲ್, ಸ್ನಾತಕೋತ್ತರ ಪದವೀಧರ ಶಿಕ್ಷಕ (ಪಿಜಿಟಿ )ಹಾಗೂ ತರಬೇತಿ ಪಡೆದ ಪದವೀಧರ ಶಿಕ್ಷಕ (ಟಿಜಿಟಿ) ಹುದ್ದೆಗಳ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧರಿತ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ಪ್ರಕಾರ, ಈಗಾಗಲೇ ಕ್ರಿಯಾತ್ಮಕ ಶಾಲೆಗಳು ಮತ್ತು ಈ ವರ್ಷ ಕಾರ್ಯರೂಪಕ್ಕೆ ಬರಲಿರುವ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಶಿಕ್ಷಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಸಲುವಾಗಿ ಆಯಾ ರಾಜ್ಯಗಳೊಂದಿಗೆ ಜಂಟಿಯಾಗಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಪ್ರಸ್ತುತ ನಿಯಮಿತವಾಗಿ ಭರ್ತಿ ಮಾಡಿದ ತಾತ್ಕಾಲಿಕ ಅಥವಾ ಒಪ್ಪಂದದ ಸಿಬ್ಬಂದಿ ಹುದ್ದೆಗಳನ್ನು ಹೊರತುಪಡಿಸಿ ಲೆಕ್ಕ ಹಾಕಲಾಗಿದೆ.

ಆಯ್ಕೆ ಮಾನದಂಡಗಳು:  ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಯೋಜನೆ, 1998 ರಿಂದ ಕಾರ್ಯರೂಪಕ್ಕೆ ಬಂದಿದೆ. ಪರಿಷ್ಕರಿಸಿದ ಯೋಜನೆಯಡಿ, ಈಗಿರುವ 288 ಶಾಲೆಗಳ ಜೊತೆಗೆ ಮತ್ತೆ ಹೊಸದಾಗಿ 452 ಶಾಲೆಗಳನ್ನು ಸ್ಥಾಪಿಸಲಾಗುವುದು. ಮುಂಬರುವ ವರ್ಷಗಳಲ್ಲಿ ಶಾಲೆಗಳ ಸಂಖ್ಯೆ ೭೪೦ಕ್ಕೆ ಏರಬೇಕು. ಇದರ ಮಧ್ಯೆ ೧೦೦ ಶಾಲೆಗಳನ್ನ ತೆರೆಯಲು ರಾಜ್ಯಗಳು ಸಲ್ಲಿಸಿದ್ದ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದ್ದು, ನಿರ್ಮಾಣ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಸಚಿವಾಲಯದ ತಿಳಿಸಿದೆ.

ಪತ್ರ ಬರೆದು, ಚಿನ್ನದ ಪದಕ ಗೆದ್ದು, ಸ್ವಿಜರ್ಲೆಂಡ್‌ಗೆ ಹೋಗಿ!

click me!