ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ನೇಮಕಾತಿ ಪತ್ರ ಕೊಟ್ಟ ಸಿಎಂ ಸಿದ್ದರಾಮಯ್ಯ

By Sathish Kumar KH  |  First Published Aug 4, 2024, 4:57 PM IST

ಕರ್ನಾಟಕದ 12 ಕ್ರಿಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಸರ್ಕಾರಿ ನೌಕರಿ ನೇಮಕಾತಿ ಪ್ರಮಾಣ ಪತ್ರವನ್ನು ನೀಡಿದರು.


ಬೆಂಗಳೂರು (ಆ.04): ಒಲಿಂಪಿಕ್ಸ್, ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್‌ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಗೆದ್ದ ಕರ್ನಾಟಕದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು ನೇರವಾಗಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಣೆ ಮಾಡಿದರು. ಈ ಮೂಲಕ 11 ಜನರಿಗೆ ಬಿ ಗ್ರೇಡ್ ಹಾಗೂ ಒಬ್ಬರಿಗೆ ಎ ಗ್ರೇಡ್ ಹುದ್ದೆ ನೀಡುವ ಸರ್ಕಾರಿ ನೌಕರರನ್ನಾಗಿ ನೇಮಕಾತಿ ಮಾಡಿಕೊಂಡರು.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಕ್ರೀಡಾಪಟುಗಳಿಗೆ  ಅವಕಾಶ ಪತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರ ನೀಡಲಾಯಿತು. ರಾಜ್ಯದಿಂದ ಆಯ್ಕೆಯಾಗಿ ಒಲಿಂಪಿಕ್ಸ್, ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್‌ ಗೇಮ್ಸ್,ಪ್ಯಾರಾ ಏಷಿಯನ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಗೆದ್ದ ಕ್ರೀಡಾಪಟುಗಳನ್ನು ನೇರವಾಗಿ ನೇಮಕಾತಿ ಮಾಡಿಕೊಳ್ಳಲಾಯಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪದಕ‌ ಪಡೆದವರಿಗೆ ರಾಜ್ಯ ಸರ್ಕಾರ ನೆರವಾಗಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ‌ ಉದ್ಯೋಗ ನೀಡಲು‌ ತೀರ್ಮಾನಿಸಿದ್ದೇವೆ. ಸುಮಾರು‌ 12 ಜನರಿಗೆ ಅವಕಾಶ ಪತ್ರ ನೇರ ನೇಮಕಾತಿಗೆ ನೀಡುತ್ತಿದ್ದೇವೆ ಎಂದು ಹೇಳಿದರು.

Latest Videos

undefined

ಕುಮಾರಸ್ವಾಮಿ ಮಾಡಿದ ಅಕ್ರಮಗಳನ್ನೆಲ್ಲಾ ಪಟ್ಟಿ ಮಾಡಿಸ್ತಿದ್ದೀನಿ, ತನಿಖೆಯೂ ಆಗುತ್ತದೆ; ಡಿ.ಕೆ. ಶಿವಕುಮಾರ್

2016-17 ಒಲಂಪಿಕ್ಸ್ ಅಸೋಸಿಯೇಷನ್ ಏರ್ಪಾಡು ಮಾಡಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೆ, ಆಗ ಘೋಷಣೆ ಮಾಡಿದ್ದೆ. ಸಾಧನೆ, ಪದಕ ಪಡೆದವರಿಗೆ ಸರ್ಕಾರದಲ್ಲಿ‌ ಆದ್ಯತೆ ಮೇಲೆ ಕೆಲಸ ನೀಡಲು ಘೋಷಣೆ ಮಾಡಿದ್ದೆ. ನಂತರ ಬಂದ ಸರ್ಕಾರ ಅದನ್ನ ಜಾರಿ ಮಾಡುವ ಪ್ರಯತ್ನ ಮಾಡಲಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದ್ಮೇಲೆ ಮಾಡಿದ್ದೇನೆ. ಪೊಲೀಸ್ ಇಲಾಖೆಯಲ್ಲಿ ಶೇ.2 ಪರ್ಸೆಂಟ್ ಮಾತ್ರ ಬೊಮ್ಮಾಯಿ ‌ಸರ್ಕಾರ ಮಾಡಿತು. ನಾನು ಬಂದ್ಮೇಲೆ ಪೋಲಿಸ್ ಹಾಗೂ ಅರಣ್ಯ ಅಧಿಕಾರಿಗಳಿಗೆ ಶೇ.3 ಪರ್ಸೆಂಟ್ ನೀಡಿದೆ. ಪದವಿ ಪಡೆದವರಿಗೆ ಗ್ರೂಪ್-ಸಿ ನೀಡಲು‌ ತೀರ್ಮಾನ ಮಾಡಿದ್ದೇವೆ ಎಂದರು.

ರಾಜ್ಯದ 12 ಸಾಧಕರಿಗೆ ಸರ್ಕಾರಿ ಉದ್ಯೋಗ ನೀಡುತ್ತಿದ್ದೇವೆ. ಒಬ್ಬರಿಗೆ ಮಾತ್ರ ಗ್ರೂಪ್ A, ಬಾಕಿ ಉಳಿದವರಿಗೆ ಗ್ರೂಪ್- B ಹುದ್ದೆ ನೀಡುತ್ತಿದ್ದೇವೆ. ಉದ್ಯೋಗ ಪತ್ರ ಪಡೆದ, ಪದಕ‌ ವಿಜೇತರಿಗೆ ತುಂಬು ಹೃದಯದ ಅಭಿನಂದನೆಗಳು. ಇನ್ನು ಪದಕ ಗೆಲ್ಲುವ ವಯಸ್ಸನ್ನ 35-40 ವರ್ಷದ ವಯೋಮಿತಿಯನ್ನ ಮಾಡಿದ್ದೇವೆ. ಉದ್ಯೋಗಕ್ಕೆ ಸೇರಿಕೊಳ್ಳಲು 45 ವರ್ಷಗಳ ವಯೋಮಿತಿಯನ್ನ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.

ಕುಮಾರಸ್ವಾಮಿ ಪ್ಯಾಂಟಿನೊಳಗೆ ಖಾಕಿ ಚೆಡ್ಡಿ ಇದೆ; ಅವರ ಆಸ್ತಿಯಿಂದ 3 ಬಜೆಟ್ ಮಾಡಬಹುದು: ಸಚಿವ ಜಮೀರ್ ಅಹಮ್ಮದ್

ನೇಮಕಾತಿ ಪ್ರಮಾಣ ಪತ್ರ ಪಡೆದ ಕ್ರೀಡಾಪಟುಗಳು ಮತ್ತು ಅವರ ಹುದ್ದೆಯ ವಿವರ

  1. ಗಿರೀಶ್  ಹೆಚ್.ಎನ್ - ಕ್ಲಾಸ್ ಒನ್ ಆಫೀಸರ್ ಹುದ್ದೆ
  2. ದಿವ್ಯಾ.ಟಿ.ಎಸ್- ಗ್ರೂಪ್ ಬಿ ಹುದ್ದೆ
  3. ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
  4. ಸುಷ್ಮಿತ ಪವಾರ್ ಓ- ಗ್ರೂಪ್ ಬಿ ಹುದ್ದೆ
  5. ನಿಕ್ಕಿನ್ ತಿಮ್ಮಯ್ಯ ಸಿ.ಎ- ಗ್ರೂಪ್ ಬಿ
  6. ಎಸ್.ವಿ.ಸುನೀಲ್ -ಗ್ರೂಪ್ ಬಿ ಹುದ್ದೆ
  7. ಕಿಶನ್ ಗಂಗೊಳ್ಳಿ- ಗ್ರೂಪ್ ಬಿ ಹುದ್ದೆ
  8. ರಾಘವೇಂದ್ರ- ಗ್ರೂಪ್ ಬಿ ಹುದ್ದೆ
  9. ರಾಧಾ ವಿ- ಗ್ರೂಪ್ ಬಿ ಹುದ್ದೆ
  10. ಶರತ್ ಎಂ.ಎಸ್- ಗ್ರೂಪ್ ಬಿ ಹುದ್ದೆ
  11. ಗುರುರಾಜ - ಗ್ರೂಪ್ ಬಿ ಹುದ್ದೆ
  12. ಮಲಪ್ರಭಾ ಯಲ್ಲಪ್ಪ ಜಾಧವ- ಗ್ರೂಪ್ ಬಿ ಹುದ್ದೆ
click me!