ಗ್ರಾಮಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Suvarna News  |  First Published Feb 18, 2020, 4:18 PM IST

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.


ಬೆಂಗಳೂರು, (ಫೆ.18): ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 50 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. 

Latest Videos

undefined

KSRTC ನೇಮಕಾತಿ: 3745 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. 

ವಯೋಮಿತಿ: ಗ್ರಾಮಲೆಕ್ಕಿಗ ಹುದ್ದೆಗಳಿಗೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಬೃಹತ್ ಉದ್ಯೋಗ ಮೇಳ 

ವೇತನ ಶ್ರೇಣಿ:  ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400 ರೂ ರಿಂದ 42,000 ರೂ ವೇತನವನ್ನು ನಿಗಿದಿಪಡಿಸಆಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು. 

ಪದವೀಧರರಿಗೆ ಕನಿಷ್ಠ 19 ಸಾವಿರ ರೂ. ವೇತನ: ಕೋರ್ಟ್ ಮಹತ್ವದ ಆದೇಶ

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 300 ರೂ. ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 150 ರೂ. ನಿಗದಿಪಡಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಅಂಚೆ ಕಛೇರಿಯ ಮೂಲಕ ಮಾರ್ಚ್ 24,2020ರೊಳಗೆ ಪಾವತಿಸಬೇಕಿರುತ್ತದೆ. 

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ .

click me!