ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಮೂಲಕ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಬೆಂಗಳೂರು, (ಜ.22): 2021ನೇ ಸಾಲಿನಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಆದೇಶವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. ಇದಿರಂದ ರಾಜ್ಯ ಸರ್ಕಾರಿ ನೌಕರರಿಗೆ ಸಂತಸ ತಂದಿದೆ.
ಬೆಂಗಳೂರು: 2021ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ಕಡತ ಪರಿಶೀಲಿಸಿದ ಸಿಎಂ, ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮಾನ್ಯ ಮಾಡಿ ಈ ಹಿಂದಿನ ಹಳೇ ಆದೇಶವನ್ನು ಹಿಂಪಡೆದಿದ್ದಾರೆ.
ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ
\ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಇದರಿಂದ ಸರ್ಕಾರಿ ನೌಕರರ 15 ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿಯಲಾಗಿತ್ತು. ಅದನ್ನು 2021ನೇ ಸಾಲಿಗೂ ವಿಸ್ತರಿಸಿತ್ತು. ಸರ್ಕಾರಿ ನೌಕರರ ಸಂಘ ಈ ತೀರ್ಮಾನ ರದ್ದು ಮಾಡುವಂತೆ ಆಗ್ರಹಿಸಿತ್ತು.