ಕರ್ನಾಟದಲ್ಲಿ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಕೂಗು: ಏರಿಸದಿದ್ದರೆ ಹೋರಾಟ..!

By Kannadaprabha News  |  First Published Aug 16, 2024, 9:06 AM IST

ರಾಜ್ಯದಲ್ಲಿ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ. ಆದರೆ, ಈವರೆಗೂ ಯಾವುದೇ ಪ್ರಯೋಜನ ವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಉದ್ಯೋಗಾಕಾಂಕ್ಷಿಗಳು 


ಮೋಹನ ಹಂಡ್ರಂಗಿ

ಬೆಂಗಳೂರು(ಆ.16):  ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳ ಕೂಗು ಹೆಚ್ಚಾಗಿದೆ. ಸಾಮಾನ್ಯ ವರ್ಗಕ್ಕೆ 25ರಿಂದ 30 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 27ರಿಂದ 33 ವರ್ಷಕ್ಕೆ ಗರಿಷ್ಠ ವಯೋಮಿತಿ ಏರಿಕೆಗೆ ಉದ್ಯೋಗಾಕಾಂಕ್ಷಿಗಳು ರಾಜ್ಯ ಸರ್ಕಾರ ವನ್ನು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರ ಈ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ.

Tap to resize

Latest Videos

undefined

ಗುಜರಾತ್, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇತರೆ ರಾಜ್ಯ ಗಳಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಅಭ್ಯರ್ಥಿಗಳಿಗೆ ನಿಗದಿತ ಗರಿಷ್ಠ ನಿಗದಿತ ಗರಿಷ್ಠ ವಯೋಮಿತಿ ಕಡಿಮೆ ಇದೆ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳು ಪೊಲೀಸ್ ಇಲಾಖೆ ಸೇರುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡ ಲಾಗುತ್ತಿದೆ. ಆದರೆ, ಈವರೆಗೂ ಯಾವುದೇ ಪ್ರಯೋಜನ ವಾಗಿಲ್ಲವೆಂದು ಉದ್ಯೋಗಾಕಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಎಎಸ್ ಪರೀಕ್ಷೆ ಮುಂದೂಡಿಕೆ ಮಾಡಿ; ತರಾತುರಿ ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಂದ್ರ ಸಚಿವರು

ನೇಮಕಾತಿ ಪ್ರಕ್ರಿಯೆ ವಿಳಂಬ: ರಾಜ್ಯದಲ್ಲಿ ಪೊಲೀಸ್ ಕಾನ್ಸ್‌ ಟೇಬಲ್ ನೇಮಕಾತಿ ಪ್ರಕ್ರಿಯೆ ವಿಳಂಬವಾಗು ತ್ತಿದೆ. ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆಸೇರಿದಂತೆ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿ ಗಳಿಗೆ ನೇಮಕಾತಿ ಆದೇಶ ಪತ್ರ ನೀಡಲು ಕನಿಷ್ಠ ಮೂರು ವರ್ಷ ಸಮಯ ಹಿಡಿಯು ತ್ತಿದೆ. ಇದರಿಂದ ಗರಿಷ್ಠ ವಯೋಮಿತಿಯ ಗಡಿಯಲ್ಲಿರುವ ಉದ್ಯೋಗಾಕಾಂಕ್ಷಿ ಗಳು ಮತ್ತೆ ನೇಮಕಾತಿಯಲ್ಲಿ ಪಾಲ್ಗೊಳ್ಳುವ ಅನುಕೂಲವಾಗಲಿದೆ ಎಂದು ಉದ್ಯೋಗಾಕಾಂಕ್ಷಿಗಳು ಹೇಳುತ್ತಾರೆ. 

ಈ ಹಿಂದೆ ಭರವಸೆ ನೀಡಿದ್ದ ಸಿದ್ದು: 

ಈ ಎಸ್ಸಿ, ಎಸ್ಟಿ, ಒಬಿಸಿ ಗರಿಷ್ಠ ವಯೋಮಿತಿ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪೊಲೀಸ್ ಕಾನ್ ಟೇಬಲ್ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹೆಚ್ಚಳ ಸಂಬಂಧ ಅಂದಿನ ಗೃಹ ಸಚಿವ ಮೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ತಾವು ಅಧಿ ಕಾಲಕ್ಕೆ ಬಂದರೆ ಬೇಡಿಕೆ ಈಡೇರಿಸುವ ಭರವಸೆಯನ್ನೂ ನೀಡಿದ್ದರು. ಈಗ ಸ್ವತಃ ಸಿದ್ದರಾಮಯ್ಯ ಅವರೇ ಸಿಎಂ ಆಗಿದು ವುದರಿಂದ ಗರಿಷ್ಠ ವಯೋಮಿತಿ ಹೆಚ್ಚಳದ ಬೇಡಿಕೆ ಈಡೇರಿಸಬೇಕು ಎಂದು ಉದ್ಯೋ ಗಾಕಾಂಕ್ಷಿಗಳು ಒತ್ತಾಯಿಸಿದ್ದಾರೆ.

ಸಾರಿಗೆ ನೌಕಕರ ಬಹುದಿನದ ಬೇಡಿಕೆ ಈಡೇರಿಸಿದ ಕೆಎಸ್‌ಆರ್‌ಟಿಸಿ; ಸರ್ಕಾರಿ ನೌಕರರಂತೆ ವೇತನ ಸೌಲಭ್ಯ

ರಾಜ್ಯದಲ್ಲಿ 20 ಸಾವಿರ ಹುದ್ದೆ ಖಾಲಿ!: 

ರಾಜ್ಯ ಪೊಲೀಸ್ ಇಲಾಖೆಯಲ್ಲಿ 20 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳುಖಾಲಿ ಇವೆ. ಈ ಹುದ್ದೆಗಳ ಭರ್ತಿ ಸಂಬಂಧ ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡುವುದಾಗಿ ಗೃಹ ಸಚಿವ
ಡಾ.ಜಿ.ಪರಮೇಶ್ವರ್ ಹಲವು ಬಾರಿ ಹೇಳಿದ್ದಾರೆ. ಈ ನೇಮಕಾತಿ ಅಧಿಸೂಚನೆ ಹೊರಡಿಸುವ ಮುನ್ನ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಕಾಯಂ ಆಗಿ ಹೆಚ್ಚಿಸಿ ಗಪಟ್ ನೋಟಿಫಿಕೇಶನ್ ಹೊರಡಿಸಬೇಕು ಎಂಬುದು ಒತ್ತಾಯವಾಗಿದೆ.

ಕಷ್ಟದ ನಡುವೆ ಪರೀಕ್ಷೆಗೆ ತಯಾರಿ: 

ಪೊಲೀಸ್ ಇಲಾಖೆ ಸೇರುವ ಹೆಬ್ಬಯಕೆಯೊಂದಿಗೆ ರಾಜ್ಯಾದ್ಯಂತ ಲಕ್ಷಾಂತರ ಉದ್ಯೋಗಾಂಕ್ಷಿಗಳು ಪರೀಕ್ಷೆಗಳಿಗೆ ತಯಾರಿಯಲ್ಲಿ ತೊಡಗಿದ್ದಾರೆ. ಸಿಎಆರ್, ಡಿಎಆರ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಕನಿಷ್ಠ ಎಸೆಸ್ಸೆಲ್ಸಿ ಹಾಗೂ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ವಿದ್ಯಾ ರ್ಹತೆ ನಿಗದಿಗೊಳಿಸಲಾಗಿದೆ. ಯುವಕ- ಯುವತಿಯರು ಕಷ್ಟಗಳ ನಡುವೆ ಪರೀಕ್ಷೆ ಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದರಿಂದ ನೇಮಕಾತಿ ವಿಳಂಬವಾಗುತ್ತಿ ರುವುದರಿಂದ ಉದ್ಯೋಗಾಕಾಂಕ್ಷಿಗಳು ಗರಿಷ್ಠ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ.

click me!