ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಆದೇಶ ಹೊರಡಿಸಲಾಗಿದೆ.
ಬೆಂಗಳೂರು (ಎ.5): ಕಾಲೇಜು ಶಿಕ್ಷಣ ಇಲಾಖೆಯಲ್ಲಿ (Department of College Education) ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ (Teaching) ಹಾಗೂ ಬೋಧಕೇತರ (non Teaching) ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ (Transfer Counseling ) ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ (Dr CN ashwath narayan) ಅವರು ವರ್ಗಾವಣೆ ವೇಳಾಪಟ್ಟಿಯನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರು (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ.
VIMS BELLARY RECRUITMENT 2022: ಉಪನ್ಯಾಸಕ ಹುದ್ದೆಗಳಿಗೆ ವಿಮ್ಸ್ ನೇಮಕಾತಿ
ಮಂಜೂರಾದ ಬೋಧಕರ ಹುದ್ದೆಗಳ ಶೇ 9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶ ಇದೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಆದೇಶ ಹೊರಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: pic.twitter.com/PLEAR84HSy
ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯಗೊಳಿಸುವ ಆನ್‌ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://dce.karnataka.gov.in/ ಗೆ ಭೇಟಿ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.
Bank of Baroda Recruitment 2022: 26 ಬ್ರ್ಯಾಂಚ್‌ಗಳಲ್ಲಿ 159 ಹುದ್ದೆಗಳ ಭರ್ತಿಗೆ ನೇಮಕಾತಿ
ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ನಿರ್ಧಾರ ಏ.8 ರಂದು ಕೌನ್ಸೆಲಿಂಗ್: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಈ ಮಾಹಿತಿಯಲ್ಲಿ ಬದಲಾವಣೆ / ಆಕ್ಷೇಪಣೆ ಇದ್ದಲ್ಲಿ ಏ.6ರ ಒಳಗೆ ಇಲಾಖೆಯ ಇ-ಮೇಲ್ dce.postshifting2022@gmail.com ಗೆ ಸಲ್ಲಿಸಬಹುದು ಎಂದಿದ್ದಾರೆ.
ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏ.8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಿಯಮಗಳ ಪ್ರಕಾರ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಅವರು ವಿವರಿಸಿದ್ದಾರೆ.
ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.