DHFWS Chikkamagaluru Recruitment 2022: ಚಿಕ್ಕಮಗಳೂರಿನಲ್ಲಿ ದಾದಿಯರು​​​ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

By Suvarna NewsFirst Published Jan 6, 2022, 7:52 PM IST
Highlights

ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನಾಂಕವಾಗಿದೆ. 

ಬೆಂಗಳೂರು(ಜ.6): ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Chikkamagaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನ್ಸಲ್ಟೆಂಟ್ಸ್​, ನರ್ಸ್​​​ ಸೇರಿ ಒಟ್ಟು 45  ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್, ಎಂಬಿಬಿಎಸ್​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್​ (Offline) ಮೂಲಕ ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ chikkamagaluru.nic.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ- ಚಿಕ್ಕಮಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಕನ್ಸಲ್ಟೆಂಟ್​, ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್, ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

ಒಟ್ಟು 45 ಹುದ್ದೆಗಳ ಮಾಹಿತಿ ಇಂತಿದೆ
ಪ್ರಸೂತಿ ತಜ್ಞರು - 3 ಹುದ್ದೆಗಳು
ಮಕ್ಕಳ ತಜ್ಞರು - 3 ಹುದ್ದೆಗಳು
ಅರವಳಿಕೆ ತಜ್ಞರು - 3 ಹುದ್ದೆಗಳು
ಆಯುಷ್ ವೈದ್ಯರು - 1 ಹುದ್ದೆ
ಎಂಬಿಬಿಎಸ್/ಬಿಎಎಂಎಸ್ ವೈದ್ಯರು - 1 ಹುದ್ದೆ
ಶುಶ್ರೂಷಕರು - 1 ಹುದ್ದೆ
ನೇತ್ರ ಸಹಾಯಕರು - 3 ಹುದ್ದೆಗಳು
ಆಡಿಯೋಮೆಟ್ರಿಕ್ ಅಸಿಸ್ಟೆಂಟ್ - 1 ಹುದ್ದೆ
ರಕ್ತ ನಿಧಿ ಕೇಂದ್ರಕ್ಕೆ ಶುಶ್ರೂಷಕರು - 1 ಹುದ್ದೆ
ಆಪ್ತ ಸಮಲೋಚಕರು - 2 ಹುದ್ದೆಗಳು
ಶುಶ್ರೂಷಕರು - 9 ಹುದ್ದೆಗಳು
ಹಿರಿಯ ಮಹಿಳಾ ಆರೋಗ್ಯ ಸಹಾಯಕಿ - 1 ಹುದ್ದೆ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿವರು - 11 ಹುದ್ದೆಗಳು
ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು - 3 ಹುದ್ದೆಗಳು
ಫಾರ್ಮಾಸಿಸ್ಟ್ - 1 ಹುದ್ದೆ
ಮಲ್ಟಿ ಪರ್ಫಸ್ ವರ್ಕರ್ - 1 ಹುದ್ದೆ

KPSC GROUP C ANSWER KEY: ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ, ಆಕ್ಷೇಪಣೆ ಸಲ್ಲಿಸಲು ಜನವರಿ 11 ಕೊನೆ ದಿನ

ಆಯ್ಕೆ ಪ್ರಕ್ರಿಯೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ- ಚಿಕ್ಕಮಗಳೂರು ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ, ಅನುಭವ ಮತ್ತು ನೇರ ಸಂದರ್ಶನದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ ಮತ್ತು ವೇತನ: DHFWS ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ 40 ರಿಂದ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಧಿಸೂಚನೆ ಪ್ರಕಾರ ಕನ್ಸಲ್ಟೆಂಟ್​, ನರ್ಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  11,500-1,10,000 ರೂ ವೇತನ ನೀಡಲಾಗುತ್ತದೆ.

DHFWS ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkamagaluru.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಜನವರಿ 12, 2022ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ:
Office of District RCH Officers,
Office of District Health and Family Welfare Officers Premises,
K.M Road,
Chikkamagaluru -577102

SEBI Recruitment 2022: ಆಫೀಸರ್ ಗ್ರೇಡ್​ ಎ ಹುದ್ದೆಗೆ ಅರ್ಜಿ ಆಹ್ವಾನ

ಸ್ವೀಕರಿಸಿದ ಅರ್ಜಿಯನ್ನು  ಜನವರಿ 13ರಂದು ಪರಿಶೀಲನೆ ಮತ್ತು ನೋಂದಣಿ ಮಾಡಲಾಗುತ್ತದೆ.
ಜನವರಿ 25 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ರಚಿಸಲಾಗುತ್ತದೆ.
ಜನವರಿ 27 ರಂದು ಅಂತಿಮ ಆಯ್ಕೆ ಪಟ್ಟಿಯ ಪ್ರಕಟಣೆ ಹೊರಡಿಲಾಗುತ್ತದೆ.
ಜನವರಿ 28 ರಂದು ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

click me!