* ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಭರವಸೆ
* ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಒತ್ತು ನೀಡಲಾವುದು ಎಂದ ಸಚಿವ ಬಿಸಿನಾಗೇಶ್
* ಕೆಪಿಎಸ್‌ಸಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೀದರ್, (ಅ.27): ಕಲ್ಯಾಣ ಕರ್ನಾಟಕ (Kalyan Karnataka) ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳ (Teachers Recruitment) ಭರ್ತಿಗೆ ಒತ್ತು ಕೊಡುವುದರ ಜತೆಗೆ ಮೂಲ ಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಕ್ರಮ ವಹಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು.
ಭಾಲ್ಕಿಯಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್ (BC Nagesh), ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಈ ಕಡೆ ಶಿಕ್ಷಕರ (Teachers) ಹುದ್ದೆಗಳು ಖಾಲಿ ಇರುವುದು ನಿಜ. ಹಾಗಾಗಿ ಈ ಭಾಗಕ್ಕೆ ವಿಶೇಷ ಒತ್ತು ನೀಡಲಾಗುವುದು. ಈ ಭಾಗದಿಂದಲೂ ಹೆಚ್ಚಿನ ಅಭ್ಯರ್ಥಿಗಳು ಶಿಕ್ಷಕರಾಗಿ ಹೊರ ಬರಬೇಕು. ಇದಕ್ಕಾಗಿ ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.
undefined
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೋವಿಡ್ (Convid) ನಿಯಂತ್ರಣ ಹಿನ್ನಲೆ 1 ರಿಂದ 5ರವರೆಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಮೊದಲ ದಿನಕ್ಕಿಂತ ಈಗ ವಿದ್ಯಾರ್ಥಿಗಳ (Students) ಹಾಜರಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲೆಯಿಂದ (Schools) ದೂರ ಉಳಿದ ಮಕ್ಕಳನ್ನು ಮರಳಿ ಕರೆತರುವ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಲಾಗಿದೆ. ಇನ್ನೂ ಆರಂಭದಲ್ಲಿ ಸೇತು ಬಂಧು ಕಾರ್ಯಕ್ರಮ ಹೆಚ್ಚು ನಡೆಸುವುದು, ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗುವಿನಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು. ಈ ಸಂಬಂಧ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಹೇಳಿದರು.
ಕೋವಿಡ್ ಸೋಂಕಿನಿಂದ ಮೃತಪಟ್ಟ ಎಲ್ಲ ಶಿಕ್ಷಕರಿಗೆ ಸರ್ಕಾರದಿಂದ ಪರಿಹಾರ ಸಿಗುವುದಿಲ್ಲ. ಕೋವಿಡ್‌ಗೆ ಸಂಬಂಧಿತ ಕರ್ತವ್ಯಕ್ಕೆ ಹಾಜರಾದಲ್ಲಿ ಸಾವನ್ನಪಿದ ಶಿಕ್ಷರಿಗೆ ಪರಿಹಾರ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಪಿಎಸ್‌ಸಿ ಗ್ರೂಪ್-ಸಿ ಹುದ್ದೆ ವೇಳಾಪಟ್ಟಿ ಪ್ರಕಟ
ಕರ್ನಾಟಕ ಲೋಕ ಸೇವಾ ಆಯೋಗ (KPSC) ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳ (Jobs) ಪರೀಕ್ಷೆಗಳನ್ನು ಮುಂದೂಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಪ್ರಕಾರವಾಗಿ ಪದವಿ ಮಟ್ಟದ ವಿದ್ಯಾರ್ಹತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು (Exams) ಡಿ.5 ಮತ್ತು ಕಡ್ಡಾಯ ಭಾಷಾ ಪರೀಕ್ಷೆಯನ್ನು ಡಿ.4 ರಂದು ನಡೆಸಲು ನಿರ್ಧರಿಸಿದೆ.
ಪದವಿಗಿಂತ ಕೆಳ ಮಟ್ಟದ ವಿದ್ಯಾರ್ಹತೆ ಪರೀಕ್ಷೆಯನ್ನು ಈ ಹಿಂದೆಯಂತೆಯೇ ಡಿ.19ರಂದು ನಡೆಸಲಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇಲಾಖೆ http://kpsc.kar.nic.in/ ವೆಬ್‌ಸೈಟ್‌ನಲ್ಲಿ ನೋಡಬಹುದು.