Gadag Taluk Panchayat Recruitment 2022: ನರೇಗಾ ಯೋಜನೆಯಡಿ ಖಾಲಿ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ

By Suvarna News  |  First Published Jan 2, 2022, 9:02 PM IST

ನರೇಗಾ ಯೋಜನೆಯಡಿ ಗದಗ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. 


ಗದಗ(ಜ.2): ಗದಗ ತಾಲೂಕು ಪಂಚಾಯಿತಿಯಲ್ಲಿ (gadag taluk panchayat) 2 ಅಡ್ಮಿನಿಸ್ಟ್ರೇಟಿವ್​ ಅಸಿಸ್ಟೆಂಟ್ (Administrative Assistant) ಹುದ್ದೆಗಳು ಖಾಲಿ ಇದ್ದು,  ನರೇಗಾ (MGNREGA) ಯೋಜನೆಯಡಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 4, 2022  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ gadag.nic.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಗದಗ ಜಿಲ್ಲಾ ಪಂಚಾಯತ್ ನ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಟೈಪಿಂಗ್ ಪರಿಣಿತಿಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Tap to resize

Latest Videos

undefined

ವಯೋಮಿತಿ: ತಾಲೂಕು ಪಂಚಾಯತ್ ಗದಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.  ಆಯಾಯ ವರ್ಗದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಗದಗ ಜಿಲ್ಲಾ ಪಂಚಾಯತ್ ನ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನುಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ: ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://gadag.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 4ರೊಳಗೆ ಅರ್ಜಿ ಸಲ್ಲಿಸಿ.

ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ. https://cdn.s3waas.gov.in/s3912d2b1c7b2826caf99687388d2e8f7c/uploads/2021/12/2021122871.pdf
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://sevasindhuservices.karnataka.gov.in/login.do

Library Supervisor Recruitment 2022: ಹಾವೇರಿಯ ಪಂಚಾಯತ್‌ನಲ್ಲಿ ಗ್ರಂಥಾಲಯ

ವಿಜಯಪುರ ಪಂಚಾಯತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Library Supervisor ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ https://vijayapura.nic.in/ ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IBPS Prelims Result 2021: ಬ್ಯಾಂಕಿಗ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ

ಅರ್ಹತೆಗಳು: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. 
ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ  ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು.

ಕಚೇರಿ ವಿಳಾಸ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

click me!