ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮೈಕ್ರೋ ಫೀಡರ್ ಫ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗಿನ ಮತ್ತಷ್ಟು ಮಾಹಿತಿಗಾಗಿ ಮುಂದೆ ಓದಿ...
ಬೆಂಗಳೂರು, (ಜ.21): ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಕಾರ್ಯಸ್ಥಾನ ಮುನಿರಾಬಾದ್ ವೃತ್ತದಲ್ಲಿ ಒಟ್ಟು 26 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
26 ಮೈಕ್ರೋ ಫೀಡರ್ ಫ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಯು ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಕ್ರೋ ಫೀಡರ್ ಫ್ರಾಂಚೈಸಿ ಆಗಬಯಸುತ್ತಾನೋ ಆ ಗ್ರಾಮ ಪಂಚಾಯಿತಿಯ ಖಾಯಂ ನಿವಾಸಿಯಾಗಿರಬೇಕು.
ವಿದ್ಯಾರ್ಹತೆ: ಡಿಪ್ಲೋಮಾ/ಐಟಿಐ/ಜೆ.ಓ.ಸಿ/ಪಿ.ಯು.ಸಿ/ಎಸ್‌ಎಸ್‌ಎಲ್‌ಸಿ (ಡಿಪ್ಲೋಮಾ,ಐಟಿಐ, ಜೆಓಸಿ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆಯಿರುತ್ತದೆ) ಇದರಲ್ಲಿ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಿರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಡೆದ ಅಂಕ ಮತ್ತು ಅವರ ವಿದ್ಯಾಭ್ಯಾಸದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 500/-ರೂ ಡಿ.ಡಿಯನ್ನು ಕಾರ್ಯನಿರ್ವಾಹಕ ಅಭಿಯಂತರರು, ಕಾರ್ಯ ಮತ್ತು ಪಾಲನಾ ವಿಭಾಗ ಜೆಸ್ಕಾಂ, ಕೊಪ್ಪಳ/ಗಂಗಾವತಿ ರವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗ ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಅಭ್ಯರ್ಥಿ ಗಳು ಪ್ರಕಟಣೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 31,2020ರೊಳಗೆ ನೊಂದಣಿ ಅಂಚೆ ಅಥವಾ ಖುದ್ದಾಗಿ ಬಂದು ವಿಭಾಗೀಯ ಕಛೇರಿಗೆ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 08539-27076 ನಂಬರ್‌ಗೆ ಸಂಪರ್ಕಿಸಬಹುದು.