ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳನ್ನು ಕೈಬಿಟ್ಟು ಉಳಿದವರಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಸಾಧ್ಯವೇ ಎಂದು ಹೈಕೋರ್ಟ್ ಸರ್ಕಾರಕ್ಕೆ ಪ್ರಶ್ನೆ ಮಾಡಿದೆ.
ಬೆಂಗಳೂರು (ಜೂ.15): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪಿಗಳನ್ನು ಬಿಟ್ಟು ಉಳಿದ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಮುಮದುವರೆಸಲು ಸಾಧ್ಯವೇ ಎಂದು ಹೂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 545 ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮ ಪ್ರಕರಣದಲ್ಲಿ ಹಲವು ಆರೋಪಿಗಳು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆದರೆ, ಯಾವುದೇ ಅಕ್ರಮವೆಸಗದೇ ಪರೀಕ್ಷೆಯನ್ನು ಬರೆದು ಉತ್ತೀರ್ಣರಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಪರೀಕ್ಷೆ ಮಾಡದೇ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠವು ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಅಕ್ರಮವನ್ನು ನಡೆಸಿ ಬಂಧಿತವಾದ ಆರೋಪಿಗಳನ್ನ ಬಿಟ್ಟು , ಉಳಿದ ಅಭ್ಯರ್ಥಿಗಳಿಗೆ ನೇಮಕ ಪ್ರಕ್ರಿಯೆ ನಡೆಸಲು ಸಾಧ್ಯವೇ.? ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ಪ್ರಶ್ನೆ ಮಾಡಿದೆ.
undefined
ಪ್ರತಿನಿತ್ಯ ಪ್ರಾರ್ಥನೆಯಲ್ಲಿ ಸಂವಿಧಾನ ಪೀಠಿಕೆ ಓದುವುದನ್ನೂ ಕಡ್ಡಾಯಗೊಳಿಸಿದ ಸರ್ಕಾರ
ಸಾಮರ್ಥ್ಯ ಪರೀಕ್ಷೆ ನಡೆಸಿ ನೇಮಕಾತಿ ಪರೀಕ್ಷೆ ಮುಂದುವರೆಸಬಹುದೇ? : ಮತ್ತೊಂದೆಡೆ ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಉತ್ತಮ ಅಂಕ ಗಳಿಸಿದ ಆರೋಪರಹಿತ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆಯನ್ನು ನಡೆಸಿ ಅವರ ಸಾಮರ್ಥ್ಯ ತಿಳಯಲು ಸಾಧ್ಯವೇ? ಈ ಬಗ್ಗೆ ಸರ್ವಸಮ್ಮತ ಅಭಿಪ್ರಾಯ ಏನಿದೆ ಎಂಬುದನ್ನ ತಿಳಿಸಲು ಅರ್ಜಿದಾರರು ಹಾಗೂ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಯನ್ನು ನೀಡಿದೆ. ಈ ಬಗ್ಗೆ ಸರ್ಕಾರದ ಪರವಾಗಿ ಬಂದ ಅಡ್ವೋಕೇಟ್ ಜನರಲ್‌ಗೆ ಹೈಕೋರ್ಟ್‌ಗೆ ಉತ್ತರಿಸಿ ರಾಜ್ಯ ಸರ್ಕಾರದ ಅಭಿಪ್ರಾಯ ಪಡೆದು ತಿಳಿಸುವುದಾಗಿ ಹೇಳಿದ್ದಾರೆ.
ಸರ್ಕಾರ ಮತ್ತು ಅರ್ಜಿದಾರರಿಂದ ಪಡೆದ ಸರ್ವಸಮ್ಮತ ಅಭಿಪ್ರಾಯ ನ್ಯಾಯಾಲಯಕ್ಕೆ ನೀಡಲು 10 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಜೂ.27ಕ್ಕೆ ಮುಂದೂಡಲಾಯಿತು. ನ್ಯಾ.ಜಿ. ನರೇಂದರ್ ಹಾಗೂ ನ್ಯಾ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠದಿಂದ ಅರ್ಜಿ ವಿಚಾರಣೆ ಮಾಡಲಾಯಿತು. ಅರ್ಜಿದಾರರ ಪರ ವಕೀಲರಾದ ಫಣಿಂದ್ರ, ರವಿಶಂಕರ್ ಹಾಗೂ ರಾಜಗೋಪಾಲ್ ಹಾಜರಿದ್ದರು.
PSI Recruitment Scam: ಕಾನೂನು ತಜ್ಞ ರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ, ಗೃಹ ಸಚಿವ ಡಾ ಪರಮೇಶ್ವರ
35 ಆರೋಪಿಗಳ ಬಂಧನ: ರಾಜ್ಯದಲ್ಲಿ ಒಟ್ಟು 545 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, 55 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇನ್ನು ನೇಮಕಾತಿ ಪ್ರಕ್ರಿಯೆಯಲ್ಲಿ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾಗ ಅಕ್ರಮದ ವಾಸನೆ ಕಂಡುಬಂದು ತನಿಖೆ ನಡೆಸಿದಾಗ ಒಟ್ಟು 35 ಜನರು ಅಕ್ರಮ ಎಸಗಿರುವುದು ಪತ್ತೆಯಾಗಿದೆ. ಈಗ ಅವರೆಲ್ಲರಿಗೂ ಶಿಕ್ಷೆಯನ್ನು ಕೂಡ ವಿಧಿಸಲಾಗಿದೆ. ಆದರೆ, ಬಾಕಿ ಉಳಿದ 510 ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದಲ್ಲಿ ನೌಕರಿ ಸಿಗುವ ಸಾಧ್ಯತೆಯಿದೆ. ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರ ಮೇಲೆ ಅವರ ಭವಿಷ್ಯ ನಿಂತಿದೆ.