ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಹೇಗೆ?

By Kannadaprabha News  |  First Published Nov 19, 2023, 10:30 AM IST

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಸಾವಿರಾರು ಹುದ್ದೆಗಳು ಖಾಲಿ ಇವೆ. ಆಗಾಗ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಬಗ್ಗೆ ಮಾಹಿತಿ ನೀಡಲಾಗಿದೆ.


ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳು ನಿರ್ದಿಷ್ಟಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ತರಬೇತಿಯನ್ನು ಪಡೆಯಬೇಕಾಗುತ್ತದೆ. ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಕಾಯಂಪೂರ್ವ ಅವಧಿಯಲ್ಲಿರುತ್ತಾರೆ.

ಪೊಲೀಸ್ ಇಲಾಖೆಯಲ್ಲಿ ಆಗಾಗ ಸಿವಿಲ್ ಕಾನ್‌ಸ್ಟೇಬಲ್, ಸಶಸ್ತ್ರ ಕಾನ್‌ಸ್ಟೇಬಲ್, ಮೀಸಲು ಪೊಲೀಸ್ ಕಾನ್‌ಸ್ಟೇಬಲ್ ಹೀಗೆ ಅರ್ಜಿ ಆಹ್ವಾನಿಸುತ್ತಿರುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಸಾವಿರಾರು ಹುದ್ದೆಗಳು ಖಾಲಿ ಇದ್ದು ಆಗಾಗ ಕಾಲಕ್ರಮೇಣ ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಆರ್ಮ್ಡ್ ಪೊಲೀಸ್ ಕಾನ್‌ಸ್ಟೇಬಲ್) ನೇಮಕಾತಿ ಬಗ್ಗೆ ಮಾಹಿತಿ ನೀಡಲಾಗಿದೆ.

Tap to resize

Latest Videos

undefined

ಬಿಗ್‌ಬಾಸ್‌ ಕನ್ನಡ ಸ್ಪರ್ಧಿಗಳ ಶೈಕ್ಷಣಿಕ ಮಾಹಿತಿ, ಡ್ರೋಣ ಪ್ರತಾಪ್‌ ನಿಜವಾದ ವಿದ್ಯಾರ್ಹತೆ ಏನು?

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕದೊಳಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ತತ್ಸಮಾನ ವಿದ್ಯಾರ್ಹತೆಗಳೆಂದರೆ,

• ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿಯು ನಡೆಸುವ ಕ್ಲಾಸ್ 10 ಪರೀಕ್ಷೆ.

• ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ ಮುಂತಾದವು

ಸೂಚನೆ: ಈ ಪರೀಕ್ಷೆ ಬರೆದು, ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅಮೆಜಾನ್‌ ನಿಂದ ನೂರಾರು ಮಂದಿ ಉದ್ಯೋಗ ಕಡಿತ, ನಿಮ್ಮ ಫೇವರಿಟ್‌ ಮ್ಯೂಸಿಕ್‌ ಅಲೆಕ್ಸಾ ಸ್ಥಗಿತವಾಗುತ್ತಾ?

ವಯೋಮಿತಿ

• ಕನಿಷ್ಠ 18 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ.

• ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ.

• ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ.

ಆಯ್ಕೆ ಪ್ರಕ್ರಿಯೆ

ಮೊದಲು 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಡಿ ಒಟ್ಟು ಹುದ್ದೆಗೆ ಅರ್ಹಗೊಂಡ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಮೊದಲು ದೇಹದಾರ್ಢ್ಯತೆ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹರಾದವರಿಗೆ ಸಹಿಷ್ಣುತೆ ಪರೀಕ್ಷೆ ನಡೆಸಲಾಗುತ್ತದೆ.

ದೇಹದಾರ್ಢ್ಯತೆ ಪರೀಕ್ಷೆ

ಎಲ್ಲಾ ಸಾಮಾನ್ಯ ವರ್ಗದ ಪುರುಷ ಮತ್ತು ತೃತೀಯ ಲಿಂಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ - 168 ಸೆಂ.ಮೀ. ಕನಿಷ್ಠ ಎದೆ ಸುತ್ತಳತೆ 8 6 ಸೆಂ.ಮೀ (ಪೂರ್ತಿ ವಿಸ್ತರಿಸಿದಾಗ ಕನಿಷ್ಠ ವಿಸ್ತರಣೆ 5 ಸೆಂ.ಮೀ.

ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ - 15 5 ಸೆಂ.ಮೀ. ಎದೆ ಸುತ್ತಳತೆ 5 ಸೆಂ.ಮೀ.ಗಳ ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪೂರ್ಣವಾಗಿ ಹಿಗ್ಗಿಸಿದಾಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇರಬಾರದು.

ಸಹಿಷ್ಣುತೆ ಪರೀಕ್ಷೆ

ಪುರುಷ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಈ ಕೆಳಗಿನಂತೆ ಇರುತ್ತದೆ.

• 1600 ಮೀಟರ್ ಓಟ : 6 ನಿಮಿಷ 30 ಸೆಕೆಂಡ್.

• ಎತ್ತರ ಜಿಗಿತ : 1.20 ಮೀಟರ್‌ಗಿಂತ ಕಡಿಮೆ ಇಲ್ಲದಂತೆ.

• ಉದ್ದ ಜಿಗಿತ : 3.80 ಮೀಟರ್‌ಗಿಂತ ಕಡಿಮೆ ಇಲ್ಲದಂತೆ.

• ಗುಂಡು ಎಸೆತ (7.26 ಕೆ ಜಿ) : 5 .60 ಮೀಟರ್‌ಗಿಂತ ಕಡಿಮೆ ಇಲ್ಲದಂತೆ.

ಈ ಮೇಲಿನ ಎಲ್ಲ ಪರೀಕ್ಷೆಗೆ 3 ಅವಕಾಶಗಳು ಇರುತ್ತವೆ.

ಲಿಖಿತ ಪರೀಕ್ಷೆ

ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ 100 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಕನ್ನಡ / ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆ ಇರುತ್ತದೆ. ಸರಿ ಉತ್ತರಕ್ಕೆ 1 ಅಂಕ, ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ. ಪರೀಕ್ಷೆ ಅವಧಿ ೯0 ನಿಮಿಷ ಇರುತ್ತದೆ.

ಅಂತಿಮ ಆಯ್ಕೆಪಟ್ಟಿ ಸಿದ್ಧತೆ ಹೇಗೆ?

ಲಿಖಿತ ಪರೀಕ್ಷೆ ನಂತರ ನಡೆಸಲಾಗುವ ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ತಾತ್ಕಾಲಿಕ ಆಯ್ಕೆಪಟ್ಟಿಯ ಎಲ್ಲಾ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ

ದೃಷಿ ಪರೀಕ್ಷೆ, ಶ್ರವಣ ಶಕ್ತಿ, ರಿನ್ನೇಸ್ ಪರೀಕ್ಷೆ, ವೆಬ್ಬರ್ ಪರೀಕ್ಷೆ, ವೆರ್ಟಿಗೋ ಪರೀಕ್ಷೆ ನಡೆಸಲಾಗುತ್ತದೆ.

ಎದೆಯ ಎಕ್ಸ್ ರೇ ತೆಗೆದುಕೊಳ್ಳಲಾಗುವುದು.

ಈ ಮೇಲಿನ ವೈದ್ಯಕೀಯ ಪರೀಕ್ಷೆ ವರದಿಯನ್ನಾಧÀರಿಸಿ ಪೊಲೀಸ್ ಇಲಾಖೆ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡುತ್ತದೆ.

ತರಬೇತಿ

ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳು ನಿರ್ದಿಷ್ಟಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ತರಬೇತಿಯನ್ನು ಪಡೆಯಬೇಕಾಗುತ್ತದೆ. ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಕಾಯಂಪೂರ್ವ ಅವಧಿಯಲ್ಲಿರುತ್ತಾರೆ.

click me!