ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.
ಬೆಂಗಳೂರು (ಮೇ.31): ಪಿಎಸ್ಐ ನೇಮಕಾತಿ (PSI recruitment ) ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ ಶನಿವಾರ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ( protest) ನಡೆಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom Park) ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಸಮತಾ ಸೈನಿಕ ದಳ ಪದಾಧಿಕಾರಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದರು.
undefined
300ಕ್ಕೂ ಹೆಚ್ಚು ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದು, ಮಧ್ಯಾಹ್ನ 3ರವರೆಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬ್ರಿಟನ್‌ನ 20 ವಿವಿ ಕುಲಪತಿಗಳ ನಿಯೋಗದಿಂದ ಜೂನ್ 9ರಂದು ಕರ್ನಾಟಕ ಭೇಟಿ
ಪರೀಕ್ಷಾ ಪ್ರಕ್ರಿಯೆಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆಗೆ (PSI re-exams) ಆದೇಶ ನೀಡಿತ್ತು. ಇದಕ್ಕೆ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರಲ್ಲಿ ಒಬ್ಬರಾದ ದಿನೇಶ್ ಕುಮಾರ್ ಎಂಬುವವರು ಮಾತನಾಡಿ, ರಾಜಕಾರಣಿ ಬಿ ಟಿ ಲಲಿತಾ ನಾಯ್ಕ್ ಮತ್ತು ಸಮತಾ ಸೈನಿಕ ದಳದ ಅಧ್ಯಕ್ಷ ವೆಂಕಟಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 500ಕ್ಕೂ ಹೆಚ್ಚು ಪಿಎಸ್‌ಐ ಆಕಾಂಕ್ಷಿಗಳು ಮೂರು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮರುಪರೀಕ್ಷೆಯನ್ನು ರದ್ದುಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
Kuvempu Row; ರೋಹಿತ್ ಚಕ್ರತೀರ್ಥ ಪದಚ್ಯುತಿಗೆ ಗಣ್ಯರಿಂದ ಸಿಎಂ ಮೇಲೆ ಒತ್ತಡ
ಪ್ರತಿಭಟನಾಕಾರರನ್ನು ಭೇಟಿಯಾದ ಸಿಎಂ: ಈ ನಡುವೆ ಪ್ರತಿಭಟನಾನಿರತನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೇಟಿ ಮಾಡಿದ್ದು, ಸಿಐಡಿ ತನಿಖೆ ಪೂರ್ಣಗೊಳಿಸಿದ ಬಳಿಕ ಅಂತಿಮವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ (PSI Exam Scam) ಪ್ರಕರಣ ಸಂಬಂಧ ಕರ್ನಾಟಕ ಸರ್ಕಾರ ಹೊರಡಿಸಿದ್ದ ಮರು ಪರೀಕ್ಷೆ ವಿರುದ್ಧ ಅಭ್ಯರ್ಥಿಗಳು ಈಗಾಗಲೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ
ಒಟ್ಟು 54289 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಇದ್ದ ಆಪಾದಿತರನ್ನು ಬಿಟ್ಟು , ಉಳಿದವರಿಗೆ ಮರುಪರೀಕ್ಷೆ (Reexam) ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸರಕಾರ ಹೇಳಿತ್ತು. ಆದ್ರೆ, ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಅಭ್ಯರ್ಥಿಗಳು ತೀರ್ಮಾನಿಸಿದ್ದರು.
ಈ ನಡುವೆ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಪಿಎಸ್ಐ ಆಗುವ ಕನಸು ಹೊತ್ತು ಅಕ್ರಮದ ದಾರಿ ಹಿಡಿದ ಕಾರಣಕ್ಕೆ ದಂಪತಿಗಳಿಬ್ಬರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಮತ್ತಿಬ್ಬರನ್ನು ಬಂಧಿಸಿದೆ. ಶಾಂತಿಬಾಯಿ ನಾಯಕ್ ಮತ್ತು ಬಸ್ಯಾ ನಾಯಕ್ ಎನ್ನುವವರೇ ಬಂಧಿತ ಆರೋಪಿಗಳು.
ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕೋನಾಪೂರ ಎಸ್.ಎನ್ ತಾಂಡಾ ನಿವಾಸಿ ಶಾಂತಿಬಾಯಿ ಆಗಿರುವ ಶಾಂತಿಬಾಯಿ ನಾಯಕ್, ಪಿಎಸ್ಐ ಆಗುವ ಕನಸು ಕಂಡವಳು. ನಿಯತ್ತಾಗಿ ಓದಿ ಪರೀಕ್ಷೆ ಬರೆದಿದ್ದರೆ ಜೈಲು ಕಂಬಿ ಎಣಿಸುವ ಪ್ರಶ್ನೆಯೇ ಬರುತ್ತಿರಲಿಲ್ಲ. ಆದ್ರೆ ಶಾಂತಿಬಾಯಿ, ಈ ಪ್ರಕರಣದ ಕಿಂಗ್‌ಪಿನ್ ಇಂಜಿನಿಯರ್ ಮಂಜುನಾಥ ಮೇಳಕುಂದಾ ಜೊತೆ ಡೀಲ್ ಮಾಡಿಕೊಂಡು ಪರೀಕ್ಷೆ ಬರೆದಿದ್ದಳು.
ಈ ಪ್ರಕರಣದ ಇನ್ನೊಬ್ಬ ಪ್ರಮುಖ ಕಿಂಗ ಪಿನ್ ಬಿಜೆಪಿ ನಾಯಕಿ ದಿವ್ಯ ಹಾಗರಗಿ ಒಡೆತನದ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿಯೇ ಈ ಶಾಂತಿಬಾಯಿ ಪರೀಕ್ಷೆ ಬರೆದಿದ್ದಳು. ಪಿಎಸ್ಐ ಪರೀಕ್ಷೆ ಪಾಸ್ ಮಾಡಿಸಲು ಕಿಂಗ್ ಪಿನ್ ಮಂಜುನಾಥ್ ಜೊತೆ ಒಟ್ಟು 50 ಲಕ್ಷ ರೂಪಾಯಿ ಒಪ್ಪಂದ ಮಾಡಿಕೊಂಡಿದ್ದಳು. ಶಾಂತಿಬಾಯಿ ನಾಯಕ್ ಮತ್ತು ಈಕೆಯ ಗಂಡ ಬಸ್ಯಾ ನಾಯಕ್ ಸೇರಿ ಅಡ್ವಾನ್ಸಾಗಿ ಮಂಜುನಾಥ್‌ಗೆ 10 ಲಕ್ಷ ರೂಪಾಯಿ ಸಹ ನೀಡಿದ್ದರು. ಅದರಂತೆ ಓಎಂಆರ್ ಶೀಟ್ ತಿದ್ದುಪಡಿ ಮೂಲಕ ಈ ಶಾಂತಿಬಾಯಿ ಪಿಎಸ್ಐ ಪರೀಕ್ಷೆಯಲ್ಲಿ ಪಾಸ್ ಸಹ ಆಗಿದ್ದಳು.